ವಿಜಯಪುರ: ವಿಜಯಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಬೆಳಗ್ಗೆ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸಚಿವ ಸಂಪುಟದಲ್ಲಿ ಒಂದು ದೇಶ ಒಂದು ಚುನಾವಣೆಗೆ ಅನುಮೋದನೆ ನೀಡಿರುವ ಬಗ್ಗೆ ಕೇಳಿದಾಗ, “ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲು ಕೇಂದ್ರ ಎನ್ ಡಿಎ ಸರ್ಕಾರಕ್ಕೆ ಸರಿಯಾದ ಸಂಖ್ಯಾಬಲವಿಲ್ಲ. ಮೂರನೇ ಎರಡು ಸಂಖ್ಯಾಬಲ ಬೇಕಾಗಿದ್ದು, ಅದನ್ನು ಹೇಗೆ ಸಾಧಿಸುತ್ತಾರೋ ಗೊತ್ತಿಲ್ಲ. ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಮತ್ತೆ ಕೆಲವು ಕಡೆಗಳಲ್ಲಿ ಚುನಾವಣೆಯಾಗಿ ಎರಡು, ಮೂರು ವರ್ಷಗಳಾಗಿವೆ. ಇವುಗಳನ್ನು ಹೇಗೆ ಮಾಡುತ್ತಾರೆ ಗೊತ್ತಿಲ್ಲ. ಇದು ಕಷ್ಟಕರವಾದ ಪ್ರಕ್ರಿಯೆ. ಅವರು ತಮ್ಮದೇ ಆದ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಪಕ್ಷದ ನಿಲುವು ತಿಳಿಸಿದ್ದು, ನಾವು ಅದನ್ನು ಸಮರ್ಥಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.
ಕೇಂದ್ರದ ಅಧಿಸೂಚನೆ ನಂತರ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ:
ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದ ಬಗ್ಗೆ ಕೇಳಿದಾಗ, “ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ನಾವು ಬದ್ಧವಾಗಿದ್ದೇವೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮುನ್ನ ಇದರ ಕಾಮಗಾರಿ ನಡೆಸಬೇಕೆ ಬೇಡವೆ ಎಂದು ಚರ್ಚೆ ನಡೆಯುತ್ತಿದೆ. ಭೂಸ್ವಾಧೀನ ವಿಚಾರವಾಗಿ ಕೆಲವು ತಾರತಮ್ಯವಿದೆ. ಕೆಲವರು ನ್ಯಾಯಾಲಯದಿಂದ ಬೆಂಗಳೂರಿನ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರವನ್ನು ಪಡೆಯಲು ಆದೇಶ ತೆಗೆದುಕೊಂಡು ಬಂದಿದ್ದಾರೆ. ಇದು ಹೇಗೆ ಸಾಧ್ಯ. ಈ ನ್ಯೂನ್ಯತೆ ಸರಿಪಡಿಸಬೇಕು. ಬೊಮ್ಮಾಯಿ ಅವರ ಸರ್ಕಾರ ರೈತರಿಗೆ ನಿಗದಿಪಡಿಸಿರುವ ದರದ ಬಗ್ಗೆ ನಮಗೆ ತಕರಾರಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ” ಎಂದು ತಿಳಿಸಿದರು.
ಧರಣಿನಿರತರು ಬಹಳಷ್ಟು ಬೇಡಿಕೆಗಳನ್ನಿಟ್ಟಿರುವ ಬಗ್ಗೆ ಕೇಳಿದಾಗ, “ನೂರು ಬೇಡಿಕೆಗಳನ್ನು ಬೇಕಾದರೂ ಇಡಲಿ. ಕಾನೂನು ಚೌಕಟ್ಟಿನಲ್ಲಿ ಕಾರ್ಯರೂಪಕ್ಕೆ ತರಲು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ. ಆಲಮಟ್ಟಿ ಅಣೆಕಟ್ಟು ಎತ್ತರ 524 ಅಡಿಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಅದನ್ನು ಮಾಡುವಷ್ಟರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ. ಕೇಂದ್ರ ಸರ್ಕಾರ 6 ಸಾವಿರ ಕೋಟಿ ಅನುದಾನ ನೀಡಬೇಕಾಗಿದೆ” ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.