Viswa Havyaka Sammelana: ಹವ್ಯಕ ಸಮುದಾಯದ ಯುವಕ-ಯುವತಿಯರು 21ರೊಳಗೆ ಮದುವೆಯಾಗಿ, 3ಕ್ಕೂ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ. ಅಖಿಲ ಹವ್ಯಕ ಮಹಾಸಭಾ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ತೃತೀಯ ʼವಿಶ್ವ ಹವ್ಯಕ ಸಮ್ಮೇಳನʼದ ಕೊನೆಯ ದಿನ ನಡೆದ ಸಹಸ್ರಚಂದ್ರ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
'ಹವ್ಯಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ ಸಮುದಾಯದ ಯುವಕ-ಯುವತಿಯರಿಗೆ 18-21 ವರ್ಷಕ್ಕೆ ವಿವಾಹ ಮಾಡಿಸಬೇಕು. ಹವ್ಯಕ ಸಂತತಿ ವೃದ್ಧಿಗೆ ಕನಿಷ್ಠ ಮೂರು ಮಕ್ಕಳನ್ನಾದರೂ ಮಾಡಿಕೊಳ್ಳಬೇಕು. ಮೂರಕ್ಕಿಂತ ಹೆಚ್ಚು ಮಕ್ಕಳಿದ್ದರೆ ನಮ್ಮ ಮಠಕ್ಕೆ ನೀಡಬಹುದು ಅಂತಾ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ರಾಜಕೀಯ ತಿರುವು ಪಡೆದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್
ಹವ್ಯಕ ಸಮುದಾಯ ಇಂದು ಜನಸಂಖ್ಯೆ ಕುಸಿತ ಹಾಗೂ ಸಂಸ್ಕೃತಿಯ ಹಿನ್ನಡೆ, ನೈತಿಕತೆ ಪತನದಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ. ಹವ್ಯಕ ಸಮುದಾಯವು ಸುಟ್ಟ ಮನೆಯಂತೆ ಜ್ವಲಿಸುತ್ತಿದೆ. ಈ ಬೆಂಕಿ ಆರಿಸಲು ನೀರು ಸಾಲುತ್ತಿಲ್ಲ. ಯುವಕ-ಯುವತಿಯರು ಧರ್ಮಸಮ್ಮತವಲ್ಲದ ವಿಧಾನದಿಂದ ಶರೀರ ಮತ್ತು ಮನಸ್ಸಿನ ಅಪೇಕ್ಷೆ ಪೂರೈಸಿಕೊಳ್ಳುತ್ತಿದ್ದಾರೆ. ಇದಕ್ಕೆ ಆಧುನಿಕ ವಿಜ್ಞಾನ ಸಮ್ಮತಿ ಸೂಚಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ವಿಜ್ಞಾನವು ಅಧರ್ಮದ ಮಾರ್ಗದಲ್ಲಿ ಸಾಗುವ ದಾರಿ ತೋರಿಸುತ್ತಿದೆ. ಈ ಮಾರ್ಗದಿಂದ ರೋಗಿಯಾದರೆ ಅದಕ್ಕೆ ಔಷಧವಿದೆ ಎನ್ನುತ್ತದೆ. ಇಂತಹ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ 18 ವರ್ಷಕ್ಕೆ ಹಾಗೂ ಗಂಡು ಮಕ್ಕಳಿಗೆ 21 ವರ್ಷಕ್ಕೆ ವಿವಾಹ ಮಾಡಿಸುವುದೇ ಪರಿಹಾರೋಪಾಯ' ಎಂದು ಸ್ವಾಮೀಜಿ ಹೇಳಿದರು.
ಇದನ್ನೂ ಓದಿ: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಎನ್. ರವಿಕುಮಾರ್
ʼವಿವಾಹದ ಬಳಿಕವೂ ಶಿಕ್ಷಣ ಮುಂದುವರಿಸಿ, ಉದ್ಯೋಗವನ್ನು ಮಾಡಬಹುದಾಗಿದೆ. ತಮಿಳು ಬ್ರಾಹ್ಮಣರಲ್ಲಿ ಕನಿಷ್ಠ ವಯೋಮಿತಿಗೆ ವಿವಾಹ ಮಾಡಲಾಗುತ್ತಿದೆ. ಸೂಕ್ತ ವಯಸ್ಸಿಗೆ ಶಾಸ್ತ್ರೀಯ ವಿವಾಹವಾದರೆ ಅನೇಕ ಸಮಸ್ಯೆಗಳು ನಿವಾರಣೆಯಾಗಲಿವೆ. ಹವ್ಯಕ ಸಂತತಿ ವೃದ್ಧಿಗೆ ಹೆಚ್ಚಿನ ಮಕ್ಕಳನ್ನು ಸಮುದಾಯದವರು ಪಡೆಯಬೇಕಿದೆ. ಮೂರಕ್ಕಿಂತ ಅಧಿಕ ಮಕ್ಕಳನ್ನು ಹೊಂದಿದವರು ಆ ಮಕ್ಕಳನ್ನು ಮಠಕ್ಕೆ ಒಪ್ಪಿಸಿದಲ್ಲಿ ಅವರನ್ನು ನಾವು ನೋಡಿಕೊಳ್ಳುತ್ತೇವೆ. ಪಾರಮಾರ್ಥಿಕ ಸಾಧನೆಗೆ ನಿತ್ಯವೂ ಭಗವದ್ಗೀತೆಯ ಪಾರಾಯಣ ಮಾಡಬೇಕು. ಹವ್ಯಕರು ಯಾವಾಗಲೂ ಬ್ರಾಹ್ಮಣರಾಗಿಯೇ ಉಳಿಯಬೇಕುʼ ಎಂದು ಇದೇ ವೇಳೆ ಸ್ವಾಮೀಜಿ ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.