ಬೆಂಗಳೂರು: ಆಪರೇಷನ್ ಕಮಲದ ಮೂಲಕ ಅಧಿಕಾರ ಗಳಿಸಿದ ರಾಜ್ಯ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ 'ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ' ಎಂಬ ಹೆಸರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ಹಿಡಿದು ಎಲ್ಲಾ ಸಚಿವರು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಸಾಧನೆಯನ್ನು ಹೇಳುತ್ತಿದ್ದಾರೆ. ಇನ್ನೊಂದೆಡೆ ಒಂದು ವರ್ಷ ಪೂರೈಸಿರುವ ರಾಜ್ಯ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumarswamy) ತರಾಟೆಗೆ ತೆಗೆದುಕೊಂಡಿದ್ದಾರೆ.


ಯುದ್ಧದ ನಡುವೆ ನಮ್ಮವರನ್ನು ರಕ್ಷಿಕೊಳ್ಳುವಂತೆ ರೈತರ ಕೈ ಹಿಡಿಯಿರಿ ಎಂದು ಎಚ್‌ಡಿಕೆ ಕರೆ


COMMERCIAL BREAK
SCROLL TO CONTINUE READING

ಟ್ವೀಟರ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಚ್‌.ಡಿ. ಕುಮಾರಸ್ವಾಮಿ 'ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು' ಎಂದು ಆಗ್ರಹಿಸಿದ್ದಾರೆ.



ಇದಲ್ಲದೆ 'ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು  ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ' ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.



ಇದಲ್ಲದೆ 'ವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ರಾಜ್ಯ ಸರ್ಕಾರವನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.