BBMP ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಅರ್ಜಿ ದಿನಾಂಕ ವಿಸ್ತರಣೆ

ವಿದ್ಯಾರ್ಥಿಗಳ ಸಹಾಯಕ್ಕೆ ಅನುಗುಣವಾಗುವ ನಿಟ್ಟಿನಲ್ಲಿ ಆನ್ ಲೈನ್ ಅರ್ಜಿಗಳ ದಿನಾಂಕವನ್ನ ವಿಸ್ತರಣೆ ಮಾಡಿ ಬಿಬಿಎಂಪಿ ಆದೇಶಿಸಿದೆ.

Written by - Manjunath Hosahalli | Edited by - Zee Kannada News Desk | Last Updated : Oct 18, 2022, 06:15 PM IST
  • ಬಿಬಿಎಂಪಿ ಕಲ್ಯಾಣ ಕಾರ್ಯಕ್ರಮ
  • ಆನ್‌ಲೈನ್ ಅರ್ಜಿ ದಿನಾಂಕ ವಿಸ್ತರಣೆ
BBMP ಕಲ್ಯಾಣ ಕಾರ್ಯಕ್ರಮಗಳಡಿ ಆನ್‌ಲೈನ್ ಅರ್ಜಿ ದಿನಾಂಕ ವಿಸ್ತರಣೆ title=
ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಬರುವ ಉಚಿತ ಲ್ಯಾಪ್ ಟಾಪ್, ಅಂಧರಿಗೆ ವಿಶೇಷ್ ಸ್ಟಿಕ್, ಅಂಧರ ಲ್ಯಾಪ್ ಟಾಪ್ ಸೇರಿ ವಿವಿಧ ಕಾರ್ಯಕ್ರಮಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದ್ರೆ ವಿದ್ಯಾರ್ಥಿಗಳ ಸಹಾಯಕ್ಕೆ ಅನುಗುಣವಾಗುವ ನಿಟ್ಟಿನಲ್ಲಿ ಆನ್ ಲೈನ್ ಅರ್ಜಿಗಳ ದಿನಾಂಕವನ್ನ ವಿಸ್ತರಣೆ ಮಾಡಿ ಬಿಬಿಎಂಪಿ ಆದೇಶಿಸಿದೆ.

ಇದನ್ನೂ ಓದಿ : Audio Viral : ಮುರುಘಾಮಠದಲ್ಲಿ ಬಿಎಸ್​ವೈ, ಶಾಮನೂರು ದುಡ್ಡಿದೆಯಾ?

1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿಮನೆ ನಿರ್ಮಾಣ ಮಾಡಿಕೊಳ್ಳಲು ರೂ.5.00ಲಕ್ಷಗಳ ಸಹಾಯಧನ

2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್

3. ಅಂಧರಿಗೆ ಸ್ಮಾರ್ಟ್ ಸ್ಟಿಕ್

4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್

5. ಹಿರಿಯ ನಾಗರೀಕರಿಗೆ ಮಡಚುಬಹುದಾದ ವೀಲ್ ಚೇರ್

ಮೇಲ್ಕಂಡ ಯೋಜನೆಗಳಡಿ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-10-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 31-10-2022 ರವರೆಗೆ ವಿಸ್ತರಿಸಿದೆ. ಈ ಕೆಳಕಂಡ ಕಾರ್ಯಕ್ರಮಗಳಿಗೂ ಸಹಾ ಆನ್‌ಲೈನ್ ಮುಖಾಂತರ ಸಲ್ಲಿಸಲು ಸಾರ್ವಜನಿಕರ ಗಮನಕ್ಕೆ ತರಲಾಗಿದೆ.

1. ಮಹಿಳಾ ಸ್ವಯಂ ಉದ್ಯೋಗಕ್ಕಾಗಿ ಸಂಚಾರಿ ಉಪಹಾರ ವಾಹನ ಖರೀದಿಸಲು ಆರ್ಥಿಕ ಸಹಾಯಧನ

2. ಉದ್ಯೋಗಸ್ಥ ಮಹಿಳೆಯರಿಗೆ ದ್ವಿಚಕ್ರವಾಹನ ನೀಡುವ ಕಾರ್ಯಕ್ರಮ

ಮೇಲ್ಕಂಡ 02 ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 18.11.2022ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗಧಿಪಡಿಸಲಾಗಿರುತ್ತದೆ.

ಇದನ್ನೂ ಓದಿ : ಕನ್ನಡಿಗ ರೋಜರ್ ಬಿನ್ನಿಗೆ ಬಿಸಿಸಿಐ ಅಧ್ಯಕ್ಷ ಪಟ್ಟ

ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ರೂ.30/- ಶುಲ್ಕವನ್ನು ಪಾವತಿಸಿ ಆನ್‌ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಚೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News