ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆ (Jobs) ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Mar 17, 2022, 09:12 PM IST
  • ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆ (Jobs) ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.
ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ title=

ಬೆಂಗಳೂರು: ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆ (Jobs) ಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 07 ಕೊನೆಯ ದಿನವಾಗಿದ್ದು, ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ಶುಲ್ಕ ಪಾವತಿಸಲು ಏಪ್ರಿಲ್ 08 ಕೊನೆಯ ದಿನವಾಗಿದೆ.ಕೊಪ್ಪಳ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ http://districts.ecourts.gov.in/koppal/online-recruitment ಅಥವಾ http://karnatakajudiciary.kar.nic.in/districtrecruitment.php ಲಿಂಕ್ ಬಳಸಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಎಚ್.ಡಿ ದೇವೇಗೌಡ-ಕುಮಾರಸ್ವಾಮಿ ಅವರ ಜೊತೆಗಿನ ಚರ್ಚೆ ಫಲಪ್ರದ ಎಂದ ಸಿ ಎಂ ಇಬ್ರಾಹಿಂ

ಅರ್ಹತೆಗಳು: 

-ಅಭ್ಯರ್ಥಿಯು ಕನಿಷ್ಟ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಬೇಕು.

-ಕನ್ನಡ ಓದಲು ಮತ್ತು ಬರೆಯಲು ಬರಬೇಕು.

-ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.

ಇದನ್ನೂ ಓದಿ: ಮಕ್ಕಳ ಭವಿಷ್ಯದ ಬಗ್ಗೆ ನಿರ್ಲಕ್ಷ್ಯ ಬೇಡ; ತೀರ್ಪು ಪಾಲನೆ ಎಲ್ಲರ ಕರ್ತವ್ಯ ಎಂದ ಎಚ್ಡಿಕೆ

ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ, ಎಬಿ, 3ಎ, 3ಬಿ ವರ್ಗಕ್ಕೆ 38 ವರ್ಷ ಹಾಗೂ ಪ.ಜಾತಿ/ಪ.ಪಂ./ಪ್ರ-1 ಕ್ಕೆ 40 ವರ್ಷಗಳನ್ನು ನಿಗದಿಪಡಿಸಲಾಗಿದ್ದು, ಸರ್ಕಾರಿ ಸೇವೆಯಲ್ಲಿರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ, ಪ.ಜಾ, ಪ.ಪಂ., ಪ್ರ-1, 2ಎ, ಎಬಿ, 3ಎ, 3ಬಿ ವರ್ಗದವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅರ್ಜಿ ಶುಲ್ಕ,ಅಗತ್ಯ ದಾಖಲೆಗಳು, ನೇಮಕಾತಿ ನಿಯಮಗಳು ಹಾಗೂ ವಿಧಾನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿದ ಲಿಂಕ್ ಹಾಗೂ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಎಲ್.ವಿಜಯಲಕ್ಷ್ಮೀದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News