ವಿದ್ಯಾರ್ಥಿ ವೇತನಕ್ಕೆ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಇ-ಸ್ಕಾಲರ್ ಶಿಪ್ ಯೋಜನೆಯಡಿ 2020-21ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಟಾಪ್ ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಂದ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಇ-ಸ್ಕಾಲರ್ ಶಿಪ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Last Updated : Dec 17, 2020, 08:12 PM IST
ವಿದ್ಯಾರ್ಥಿ ವೇತನಕ್ಕೆ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರದ ಇ-ಸ್ಕಾಲರ್ ಶಿಪ್ ಯೋಜನೆಯಡಿ 2020-21ನೇ ಸಾಲಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಟಾಪ್ ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಂದ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಇ-ಸ್ಕಾಲರ್ ಶಿಪ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಸದರಿ ಯೋಜನೆಯ ವೆಬ್‍ಸೈಟ್ ನಲ್ಲಿ www.disabilityaffairs.gov.in  ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಅಥವಾ ವೆಬ್ ಸೈಟ್ www.disabilityaffairs.gov.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News