ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ಬರುವ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಮಾಹಿತಿ ತಂತ್ರಜ್ಞಾನ ಸೇವೆಗಳಿಗೆ ಸಂಬಂಧಿಸಿದ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 24ರಿಂದ 26ರವರೆಗೆ (ಮೂರು ದಿನಗಳ ಕಾಲ) ಮಾಹಿತಿ ತಂತ್ರಜ್ಞಾನ ಆಧರಿತ ವಿದ್ಯುತ್ ಸೇವೆಗಳನ್ನು ಸ್ಥಗಿತಗೊಳಿಲಾಗುತ್ತಿದೆ.
ಸದರಿ ತಂತ್ರಾಂಶಗಳು ಹಾಗೂ ಹಾರ್ಡ್ ವೇರ್ ಗಳನ್ನು ಉನ್ನತೀಕರಿಸುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ಹಾಲಿ ಇರುವ ತಂತ್ರಾಂಶಗಳನ್ನು ಹೊಸ ಹಾರ್ಡ್ ವೇರ್ ಗಳ ಮೇಲೆ ಅಳವಡಿಸುವ ಹಾಗೂ ಸ್ಥಳಾಂತರಿಸುವ ಕೆಲಸವನ್ನು ಪ್ರಥಮ ಹಂತವಾಗಿ ತೆಗೆದುಕೊಳ್ಳಲಾಗಿದೆ. ಹೀಗಾಗಿ ಬೆಂಗಳೂರು, ಮೈಸೂರು, ಬೆಳಗಾವಿ, ಹಬ್ಬಳ್ಳಿ – ಧಾರವಾಡ , ಬೆಳಗಾವಿ, ಮಂಗಳೂರು ಹಾಗು ಕಲಬರುಗಿ ನಗರ ಸೇರಿದಂತೆ 98 ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಈ ಮೂರು ದಿನಗಳ ಕಾಲ ಎಲ್ಲಾ ಮಾಹಿತಿ ತಂತ್ರಜ್ಞಾನ ಆಧರಿತ ಹಾಗೂ ವಿದ್ಯುತ್ ಕಚೇರಿಗಳ ನಗದು ಪಾವತಿ ಕೌಂಟರ್ ಗಳಲ್ಲಿ ನಗದು ಪಾವತಿ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಶಾಲೆಯಲ್ಲಿ ಮಗುವಿಗೆ ಕುಕ್ಕಿದ ಕೋಳಿ: ಪಾಲಕರಿಂದ ಶಾಲೆಗೆ ಬೀಗ!!
ಈ ಅವಧಿಯಲ್ಲಿ ಆನ್ ಲೈನ್ ಸೇವೆಗಳಾದ ಹೊಸ ವಿದ್ಯುತ್ ಸಂಪರ್ಕ, ಹೆಸರು/ ಲೋಡ್ ಬದಲಾವಣೆ, ನಗದು ಪಾವತಿ, ಆನ್ ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿಗಳು ಹಾಗೂ ಇತರ ಸೇವೆಗಳು ಲಭ್ಯವಿರುವುದಿಲ್ಲ. ಆನ್ ಲೈನ್ ಸೇವೆಗಳ ಅಲಭ್ಯತೆಯನ್ನು ಗಮನಿಸಿ ಗ್ರಾಹಕರು ಹಾಗೂ ಗುತ್ತಿಗೆದಾರರು ತಮ್ಮ ಅವಶ್ಯಕತೆಗಳನ್ನು ಮುಂಚಿತವಾಗಿ ರೂಪಿಸಿಕೊಳ್ಳಲು ಬೆಸ್ಕಾಂ ವಿನಂತಿಸಿದೆ. ಈ ಅವಧಿಯಲ್ಲಿ ವಿದ್ಯುತ್ ಸರಬರಾಜು ಸೇವೆಗಳಲ್ಲಿ ಯಾವುದೇ ವ್ಯತ್ಯಯ ವಿರುವುದಿಲ್ಲ. ಗ್ರಾಹಕರು ಆತಂಕ ಪಡಬೇಕಾಗಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆನ್ ಲೈನ್ ಸೇವೆ ಲಭ್ಯ ಇಲ್ಲದ ಪಟ್ಟಣಗಳ ವಿವರ: ಬೆಸ್ಕಾಂ: ಬೆಂಗಳೂರು ನಗರ, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ-2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿ ಬಿದನೂರು.
ಇದನ್ನೂ ಓದಿ : ಗ್ಯಾರಂಟಿ ಯೋಜನೆ: ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಹೊಟ್ಟೆಯುರಿ ಏಕೆ: ಸಿಎಂ ಪ್ರಶ್ನೆ
ಚೆಸ್ಕಾಂ : ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್. ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚೆನ್ನರಾಯಪಟ್ಟಣ.
ಮೆಸ್ಕಾಂ: ಬಂಟ್ವಾಳ, ಕಡೂರು, ತರಿಕೇರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.
ಜೆಸ್ಕಾಂ: ಮಾನವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.
ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸೇವನೂರು, ಸಿರಸಿ, ಕುಮಟಾ, ಬಾಗಲಕೋಟೆ, ರಮಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಾಪುರ ನಗರದಲ್ಲಿ ಮಾಹಿತಿ ತಂತ್ರಜ್ಞಾನ ತಂತ್ರಾಂಶ ಸೇವೆಗಳು ಲಭ್ಯವಿರುವುದಿಲ್ಲ.
ಇದನ್ನೂ ಓದಿ : ಜಾತಿ ಜನಗಣತಿ ವಿಚಾರಕ್ಕೆ ರಾಜ್ಯ ಸರ್ಕಾರ ಗೊಂದಲದಲ್ಲಿದೆ; ಕೇಂದ್ರ ಸಚಿವ ಜೋಶಿ ಟೀಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.