ಬೆಂಗಳೂರು : ಇತ್ತೀಚೆಗಷ್ಟೇ 2018-19ನೇ ಸಾಲಿನ ಬಜೆಟ್'ನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿತ್ತು. ಆದರೀಗ ಜೆಡಿಎಸ್-ಕಾಂಗ್ರೆಸ್ ಒಕ್ಕೂಟ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಹಿಂದಿನಂತೆ ಈ ಸೌಲಭ್ಯವನ್ನು ಕೇವಲ ಎಸ್ಸಿ/ಎಸ್ಟಿ ವರ್ಗದ ವಿದ್ಯಾರ್ಥಿಗಳು ಮಾತ್ರ ಪಡೆಯುವಂತಾಗಿದೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಎಲ್ಲಾ ವರ್ಗದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಸೌಲಭ್ಯ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಎಲ್ಲ 19.60 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ ಪಾಸ್‌ಗಳನ್ನು ವಿತರಿಸುವುದಾಗಿ ಘೋಷಿಸಿದ್ದರು. ಆದರೆ, ಇದೀಗ ಅಸ್ತಿತ್ವಕ್ಕೆ ಬಂದಿರುವ ನೂತನ ಸರ್ಕಾರ ಈ ಬಗ್ಗೆ ಯಾವುದೇ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಉಚಿತ ಬಸ್ ಪಾಸ್ ವಿತರಣೆಯಲ್ಲಿ ಹಳೆಯ ನಿಯಮವನ್ನೇ ಅನುಸರಿಸಲಾಗುತ್ತಿದೆ.