ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯಿಂದ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಮುಂದಾಗಿದ್ದೇವೆ ಎಂದು ಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಕಳೆದ ಬಾರಿ ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾದಾಗ ಸಂಸ್ಕರಿಸಿದ ನೀರಿನ ಬಳಕೆಗೆ ಉತ್ತೇಜನ ನೀಡಲಾಗಿತ್ತು. ಈ ಬಾರಿಯೂ ಐಐಎಸ್ಸ್‌ಸಿ ವಿಜ್ಞಾನಿಗಳು ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಉಂಟಾಗಲಿರುವ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರು ಜಲಮಂಡಳಿ ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಸಾಕಷ್ಟು ಜಾಗೃತಿಯನ್ನು ಮೂಡಿಸಲು ಮುಂದಾಗಿದೆ. ಕುಡಿಯುವ ಹಾಗೂ ಅಡುಗೆಗೆ ಹೊರತುಪಡಿಸಿ ಬಹಳಷ್ಟು ದಿನನಿತ್ಯದ ಚಟುವಟಿಕೆಗಳಿಗೆ ಸಂಸ್ಕರಿಸಿದ ನೀರನ್ನು ಬಳಸಬಹುದಾಗಿದೆ. ದೇಶದ ಗಮನ ಸೆಳೆಯುವಂತಹ ಐಪಿಎಲ್ ಕ್ರೀಡಾ ಕೂಟಕ್ಕೆ ಅಗತ್ಯವಿರುವ ನೀರಿನ ಅವಶ್ಯಕತೆಯನ್ನು ಪೂರೈಸುವ ನಿಟ್ಟಿನಲ್ಲಿ ಸಂಸ್ಕರಿಸಿದ ಸರಬರಾಜು ನೀರನ್ನು ಸರಬರಾಜು ಮಾಡುವುದರಿಂದ ದೇಶಾದ್ಯಂತ ಇನ್ನಷ್ಟು ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಹೆಚ್ಚಿನ ಪ್ರಚಾರವಾಗಲಿದೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ವಿಶೇಷ ಅನುದಾನ: ಸಿಎಂ ಸಿದ್ದರಾಮಯ್ಯ
ಈ ಹಿನ್ನಲೆಯಲ್ಲಿ ಈ ಬಾರಿಯೂ ಬೆಂಗಳೂರು ಜಲಮಂಡಳಿ ಸಂಸ್ಕರಿಸಿದ ನೀರಿನ ಸರಬರಾಜು ಮಾಡಲಿದೆ ಎಂದು ಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್ ಗಳಷ್ಟು ನೀರಿನ ಅವಶ್ಯಕತೆ ಬೀಳುತ್ತದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ KSCA ಪದಾಧಿಕಾರಿಗಳು ಮಾಡಿದ್ದ ಮನವಿಗೆ ಸ್ಪಂದಿಸಿ ಕಳೆದ ವರ್ಷದಿಂದ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲಾಗುತ್ತಿದೆ.ಇದೇ ವ್ಯವಸ್ಥೆಯನ್ನು ಈ ಬಾರಿಯೂ ಮುಂದುವರೆಸುವುದಾಗಿ ಅಧ್ಯಕ್ಷರು ತಿಳಿಸಿದರು.
ಇದನ್ನೂ ಓದಿ : ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ರನ್ಯಾ ರಾವ್ ಜೈಲು ಪಾಲು
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









