`ನಕಲಿ ವೈದ್ಯರನ್ನ ದೂರವಿಟ್ಟಾಗ ಮಾತ್ರ ನಾಟಿ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರಲು ಸಾಧ್ಯ`
ಆಧುನಿಕ ವೈದ್ಯಕೀಯದ ಜೊತೆಗೆ ಪಾರಂಪರಿಕ ವೈದ್ಯ ಪದ್ದತಿಯನ್ನ ನಾವು ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು, ನಾಗಮಂಗಲ ಆದಿಚುಂಚನಗಿರಿ ಸಂಸ್ಥಾನದಲ್ಲಿ ಇಂದು ರಾಷ್ಟ್ರೀಯ ಪಾರಂಪರಿಕ ವೈದ್ಯರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಬೆಳೆಯುತ್ತಿರುವ ವಿಜ್ಞಾನ ತಂತ್ರಜ್ಞಾನದ ಯುಗದಲ್ಲಿ ಬಹುತೇಕರು ನಾಟಿ ವೈದ್ಯ ಪದ್ದತಿಯನ್ನ ನಂಬಲ್ಲ. ಆದರೆ ಅಲೋಪತಿ ಬರುವ ಮುನ್ನ ನಮ್ಮ ರಾಜ ಮಹಾರಾಜರಿಗೆ ಚಿಕಿತ್ಸೆ ನೀಡಿ, ಕಾಯಿಲೆಗಳನ್ನ ವಾಸಿಮಾಡುತ್ತಿದ್ದುದು ನಮ್ಮ ಗಿಡ ಮೂಲಿಕೆಗಳ ಔಷಧಿಯ ನಾಟಿ ಪದ್ದತಿ ಎಂಬುದನ್ನ ಮರೆಯಬಾರದು ಎಂದರು.
ಗಿಡ ಮೂಲಿಕೆಗಳ ಚಿಕಿತ್ಸೆ, ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ತರಬೇಕು. ಆದರೆ ತರಲಾಗುತ್ತಿಲ್ಲ. ಅದಕ್ಕೆ ಮುಖ್ಯ ಕಾರಣ ನಕಲಿ ವೈದ್ಯರ ಹಾವಳಿ. ನಕಲಿ ವೈದ್ಯರ ಹಾವಳಿಯಿಂದಾಗಿಯೇ ನಾಟಿ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರದೇ ಮರೆಮಾಚಿ ಹೋಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು..
ಇದನ್ನೂ ಓದಿ: ಇಂಗ್ಲೆಂಡ್ ವಿರುದ್ದ ಹಾರ್ದಿಕ್ ಪಾಂಡ್ಯನನ್ನು ಕಣಕ್ಕಿಳಿಸುತ್ತಾರೆಯೇ ರೋಹಿತ್ ಶರ್ಮಾ? ಇಲ್ಲಾ ಈ ಆಟಗಾರನಿಗೆ ನೀಡುತ್ತಾರಾ ಅವಕಾಶ?
ಗ್ರಾಮೀಣ ಪ್ರದೇಶದಲ್ಲಿ ಬಡ ಜನರಿಗೆ ಕಡಿಮೆ ಖರ್ಚಿನಲ್ಲಿ ಆರೋಗ್ಯ ಒದಗಿಸುವಲ್ಲಿ ಪಾರಂಪರಿಕ ವೈದ್ಯರ ಕೊಡುಗೆ ಖಂಡಿತವಾಗಿಯೂ ಇದೆ. ಇವತ್ತಿಗೂ ಅನೇಕರು ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚದ ಚಿಕಿತ್ಸೆ ಹೇಳಿದಾಗ, ನಾಟಿ ಔಷಧಿಯ ಮೇಲೆ ನಂಬಿಕೆಯಿಟ್ಟು ಚಿಕಿತ್ಸೆ ಪಡೆಯುತ್ತಾರೆ. ಗಿಡಮೂಲಿಕೆ ಔಷಧಿ ಉಪಚಾರಗಳಿಂದ ಅತಿ ಕಡಿಮೆ ಖರ್ಚಿನಲ್ಲಿ ಬಡವರಿಗೆ ಆರೋಗ್ಯ ಸೇವೆ ಒದಗಿಸಬಹುದು. ಈ ನಿಟ್ಟಿನಲ್ಲಿ ನಮ್ಮ ಪಾರಂಪರಿಕ ವೈದ್ಯ ಪದ್ದತಿ ಮುಖ್ಯವಾಹಿನಿಗೆ ಬರಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸರ್ಕಾರಕ್ಕೆ ನಿಜವಾದ ನಾಟಿ ವೈದ್ಯರ ಮೇಲೆ ನಂಬಿಕೆಯಿದ್ದರೂ, ನಕಲಿ ವೈದ್ಯರಿಂದಾಗಿ ಈ ಪದ್ದತಿಯನ್ನ ಪ್ರೋತ್ಸಾಹಿಸಲು ಸಾಧ್ಯವಾಗುತ್ತಿಲ್ಲ. ನೈಜ ನಾಟಿ ವೈದ್ಯರನ್ನ ಗುರುತಿಸುವುದು ಒಂದು ಸವಾಲು. ಹೀಗಾಗಿ ಒಂದು ಫ್ರೆಮ್ ವರ್ಕ್ ಮುಖ್ಯ. ನಿಯಮಾವಳಿಗಳೊಂದಿಗೆ ನಾಟಿ ವೈದ್ಯರನ್ನ ಗುರುತಿಸುವ ವ್ಯವಸ್ಥೆ ಜಾರಿಗೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರ ಚರ್ಚಿಸಿ ತೀರ್ಮಾನಗಳನ್ನ ತೆಗೆದುಕೊಳ್ಳಲು ಮುಕ್ತ ಮನಸ್ಸು ಹೊಂದಿದೆ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಈ ನಿಟ್ಟಿನಲ್ಲಿ ನಾಟಿ ವೈದ್ಯರ ಔಷಧಿ ವಿಧಾನಗಳು, ಗಿಡಮೂಲಿಕೆಗಳ ಬಗ್ಗೆ ವಿಸ್ತ್ರತವಾಗಿ ವರದಿಯೊಂದಿಗೆ ಮನವಿ ಸಲ್ಲಿಸುವಂತೆ ಪಾರಂಪರಿಕ ವೈದ್ಯರ ಪರಿಷತ್ ಗೆ ಸಚಿವರು ಸೂಚನೆ ನೀಡಿದರು.
ಇದನ್ನೂ ಓದಿ: World Cup: ವಿಶ್ವಕಪ್‌ನ ಮಧ್ಯೆ ದಿಢೀರನೆ ಮನೆಗೆ ಮರಳಿದ್ದಾರೆ ಈ ತಂಡದ ಕ್ಯಾಪ್ಟನ್! ಮುಂದಿನ ಪಂದ್ಯದಲ್ಲಿ ಆಡ್ತಾರಾ!
ನಾಟಿ ಪದ್ದತಿ, ಅಲೋಪತಿ, ಹಳೇ ಬೇರು ಹೊಸ ಚಿಗುರು ಇದ್ದಂತೆ - ನಿರ್ಮಲಾನಂದನಾಥ ಶ್ರೀ
ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ್ ಸ್ವಾಮಿಜಿ ಆರೋಗ್ಯ ಕ್ಷೇತ್ರದಲ್ಲಿ ಹಳೇ ಬೇರು ಹೊಸ ಚಿಗುರು ಎರಡು ಮುಖ್ಯ ಎಂದು ಹೇಳಿದರು. ನಾಟಿ ವೈದ್ಯ ಪದ್ದತಿಯನ್ನ ನಿರ್ಲಕ್ಷಿಸಲು ಸಾಧ್ಯವಿಲ್ಲ. ಋಷಿಮುನಿಗಳಿಂದ ಪರಂಪರಾಗತವಾಗಿ ಬಂದಿರುವ ಭಾರತೀಯ ವೈದ್ಯ ಪದ್ದತಿಯನ್ನ ನಾವು ಉಳಿಸಿಕೊಂಡು ಹೋಗಬೇಕು. ಹಲವು ಗಿಡಮೂಲಿಕೆಗಳು ಅವಸಾನದ ಅಂಚಿನಲ್ಲಿವೆ. ಗಿಡ ಮೂಲಿಕೆ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿಜಕ್ಕೂ ಆಸಕ್ತಿ ತೋರಿಸಿ ಸಮ್ಮೇಳನಕ್ಕೆ ಬಂದಿದ್ದಾರೆ ಎಂದು ಶ್ರೀಗಳು ಶ್ಲಾಘನೆ ವ್ಯಕ್ತಪಡಿಸಿದರು.
ನಾಟಿ ವೈದ್ಯರ ಸಮ್ಮೇಳಮದಲ್ಲಿ ಮೊದಲ ಬಾರಿಗೆ ಸರ್ಕಾರದ ಆರೋಗ್ಯ ಸಚಿವರು ಪಾಲ್ಗೊಂಡಿರುವುದು ನಿಜಕ್ಕೂ ಸಂತಸದ ಸಂಗತಿ. ಏನಾದರೂ ಒಂದು ಪರಿಹಾರ ಕಂಡುಕೊಳ್ಳಬೇಕು ಎಂಬ ದೃಷ್ಠಿಕೋನವನ್ನ ದಿನೇಶ್ ಗುಂಡೂರಾವ್ ಹೊಂದಿದ್ದಾರೆ. ಈ ಹಿಂದೆ ಆಯುಷ್ ಕಾಲೇಜುಗಳಲ್ಲಿ ಪ್ರವೇಶಾತಿ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಯಿತ್ತು. ಸಮಸ್ಯೆಯನ್ನ ಸಚಿವರ ಗಮನಕ್ಕೆ ತಂದ 10 ದಿನಗಳಲ್ಲಿ ಪರಿಹಾರವನ್ನ ಸಚಿವ ದಿನೇಶ್ ಗುಂಡೂರಾವ್ ನೀಡಿದರು. ಸಮಾಜಕ್ಕೆ ಒಳ್ಳೆಯದನ್ನ ಮಾಡಬೇಕು ಎಂಬುದನ್ನ ನಿಶ್ಚಯಿಸಿಕೊಂಡು ಗುಂಡೂರಾವ್ ಮುಂದೆ ಸಾಗುತ್ತಿದ್ದಾರೆ ಎಂದು ನಿರ್ಮಲಾನಂದನಾಥ ಶ್ರೀಗಳು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನ ಶ್ಲಾಘಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.