ಬೆಂಗಳೂರು: ತೆಲಂಗಾಣದಲ್ಲಿ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಯತ್ನ ಮಾಡಿದ ಬಗ್ಗೆ ವಿಚಾರಕ್ಕೆ ನನಗೆ ಆಶ್ಚರ್ಯ ಏನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : PM Kisan ಯೋಜನೆಯಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗುತ್ತಾ 6,000 ರೂ.! ನಿಯಮ ಏನು ಹೇಳುತ್ತೆ?


ಪಂಚರತ್ನ ಯಾತ್ರೆಗೆ ಚಾಲನೆ ನೀಡಿದ ವೇಳೆ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು; ಪಾಪದ ಹಣ ಇಟ್ಟುಕೊಂಡು ಕರ್ನಾಟಕದಲ್ಲಿ ಆಪರೇಷನ್ ಕಮಲ ಮಾಡಿದರು. ಇದೇ ಪಾಪದ ಹಣದಲ್ಲಿ ಬೇರೆ ಬೇರೆ ರಾಜ್ಯದಲ್ಲೂ ಮಾಡಿ ಯಶಸ್ವಿಯಾಗಿದ್ದಾರೆ. ಈಗ ತೆಲಂಗಾಣದಲ್ಲಿ ಕೂಡ ಮಾಡಲು ಹೊರಟಿದ್ದಾರೆ ಎಂದು  ಎಂದು ಟೀಕಿಸಿದರು.


ಇದನ್ನೂ ಓದಿ : UK Prime Minister: ಇಂಗ್ಲೆಂಡ್‌ನ ನೂತನ ಪ್ರಧಾನಿಯಾಗಿ ರಿಷಿ ಸುನಕ್‌ ಆಯ್ಕೆ


ತೆಲಂಗಾಣದಲ್ಲಿ ಅಷ್ಟು ಸುಲಭವಾಗಿ ಅಕ್ರಮ ಹಣದಿಂದ ಸರ್ಕಾರವನ್ನು ಅಸ್ಥಿರಗೊಳಿಸುವುದು  ಅಸಾಧ್ಯ.‌ ಇವತ್ತು ನೇರವಾಗಿ 17 ಕೋಟಿ ಹಣದೊಂದಿಗೆ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಯಾಕೆ ಜಾಣ ಮೌನ ತಾಳಿದ್ದಾರೆ. ಪ್ರಧಾನಿ ಹಾಗೂ ಇಡಿಯವರು ಇದಕ್ಕೆ ಉತ್ತರ ಕೊಡಬೇಕಿದೆ. ಈ ಹಣ ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ಹೇಳಬೇಕೆಂದು ಒತ್ತಾಯಿಸಿದರು.


ಇಂಥ ಕೆಲಸಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಸಂವಿಧಾನವೇ ಬುಡಮೇಲು ಆಗುವ ಅಪಾಯವಿದೆ. ಬಿಜೆಪಿ ಹೋಗುತ್ತಿರುವ ದಾರಿ ಸರಿಯಲ್ಲ. ಇದು ಆ ಪಕ್ಷಕ್ಕೆ ತಿರುಗುಬಾಣ ಆಗುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.