ಬೆಂಗಳೂರು: ಮುಂದಿನ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ನಾಲ್ಕರಿಂದ ಐದು ಶಾಸಕರು ಹಾಗೂ ಒಂದು‌ ಸಂಸದ ಸ್ಥಾನವನ್ನು ಬಿಜೆಪಿ ಪಡೆಯಲಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣ ಗೌಡ ಆಪರೇಷನ್ ಕಮಲದ ಬಗ್ಗೆ ಸುಳಿವು ನೀಡಿದರು.


COMMERCIAL BREAK
SCROLL TO CONTINUE READING

ಇದನ್ನು ಓದಿ: ಟ್ವಿಟ್ಟರ್-ಎಲೋನ್ ಮಸ್ಕ್ ಒಪ್ಪಂದದಲ್ಲಿ ಚೀನಾ ಕನೆಕ್ಷನ್ ಕಂಡ ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್


ಬಿಜೆಪಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು "ನಮ್ಮ ಜೊತೆ ಯಾರು ಸಂಪರ್ಕದಲ್ಲಿ ಇದ್ದಾರೆ ಎಂಬುದು ಸ್ವಲ್ಪ ದಿನಗಳಲ್ಲಿ ಗೊತ್ತಾಗುತ್ತದೆ. ಸದ್ಯ ನಾವು 17 ಮಂದಿ ಬಿಜೆಪಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಮೂರರಷ್ಟು ಜನರನ್ನು ಕರೆದುಕೊಂಡು ಬರುತ್ತೇವೆ" ಎಂದು ತಿಳಿಸಿದರು.


"ನಮ್ಮ ಜೊತೆ ಹಲವರು ಸಂಪರ್ಕದಲ್ಲಿ ಇದ್ದಾರೆ. ಹಲವರು ನಮ್ಮ ಪಕ್ಷ ಸೇರ್ಪಡೆ ಆಗುತ್ತಾರೆ. ಯಾರೆಲ್ಲ ಬರುತ್ತಾರೆ, ಎಷ್ಟು ಜನ ಬರುತ್ತಾರೆ ಅಂತ ನಾನು ಈ ಹಂತದಲ್ಲಿ ಹೇಳಲ್ಲ. ನಮ್ಮ ಪಕ್ಷ 140 ರಿಂದ 150 ಸ್ಥಾನ ಗೆದ್ದೇ ಗೆಲ್ಲುತ್ತೆ" ಎಂದು ಭವಿಷ್ಯ ನುಡಿದರು.


ಇದನ್ನು ಓದಿ: ವ್ಯಾಕ್ಸಿನೇಷನ್ ಬಗ್ಗೆ ದೊಡ್ಡ ನಿರ್ಧಾರ- ಈಗ 6-12 ವರ್ಷದ ಮಕ್ಕಳಿಗೂ ಲಸಿಕೆ


ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೆಸರು:
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಇವರು, ಯಡಿಯೂರಪ್ಪನವರು ಬೇರೆ ಮಹನೀಯರ ಹೆಸರಿಡಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಕೂಡಾ ಚರ್ಚೆಯಾಗಬೇಕಿದೆ. ಹಿರಿಯರು ಮತ್ತೆ ಮನವೊಲಿಸಿದರೆ ಏರ್ ಪೋರ್ಟ್‌ಗೆ ಯಡಿಯೂರಪ್ಪನವರ ಹೆಸರನ್ನೇ ಇಡುವ ಕೆಲಸ ಆಗುತ್ತದೆ. ಈ ಬಗ್ಗೆ ಮತ್ತೆ ಚರ್ಚೆ ಮಾಡುತ್ತೇವೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.