`ಆಪರೇಷನ್ ಕಮಲ` ಖಂಡಿತಾ ಯಶಸ್ವಿಯಾಗಲಿದೆ: ಬಿಜೆಪಿ ಶಾಸಕ
ಈಗಾಗಲೇ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿರುವ ಪಕ್ಷೇತರ ಶಾಸಕರು ಬಿಜೆಪಿ ಸೇರಲು ಬಯಸಿದ್ದಾರೆ. ಕರ್ನಾಟಕದಲ್ಲಿ ಆಪರೇಶನ್ ಕಮಲ ಖಂಡಿತಾ ಯಶಸ್ವಿಯಾಗಲಿದೆ ಎಂದು ಶಿಂಧೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದ ಇಬ್ಬರು ಪಕ್ಷೇತರ ಶಾಸಕರು ತಮ್ಮ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲೇ 6 ರಿಂದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಬೆನ್ನಲ್ಲೇ 'ಆಪರೇಶನ್ ಕಮಲ' ಯಶಸ್ವಿಯಾಗಲಿದೆ ಎಂದು ಬಿಜೆಪಿ ನಾಯಕ ರಾಮ್ ಶಿಂಧೆ ಮಂಗಳವಾರ ಹೇಳಿದ್ದಾರೆ.
ಕರ್ನಾಟಕದಲ್ಲಿನ ಮಹತ್ವದ ರಾಜಕೀಯ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿಧಾನಸಭೆಯ ಬಿಜೆಪಿ ಶಾಸಕ ರಾಮ್ ಶಿಂಧೆ, ಈಗಾಗಲೇ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿರುವ ಪಕ್ಷೇತರ ಶಾಸಕರು ಬಿಜೆಪಿ ಸೇರಲು ಬಯಸಿದ್ದಾರೆ. ಕರ್ನಾಟಕದಲ್ಲಿ ಆಪರೇಶನ್ ಕಮಲ ಖಂಡಿತಾ ಯಶಸ್ವಿಯಾಗಲಿದೆ ಎಂದು ಶಿಂಧೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ, ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದರೂ ಯಾವುದೇ ತೊಂದರೆಯಿಲ್ಲ . ಇನ್ನೂ 118 ಸದಸ್ಯರ ಬೆಂಬಲ ಸಮ್ಮಿಶ್ರ ಸರ್ಕಾರಕ್ಕಿದೆ. ಹಾಗಾಗಿ ತಾವು ರಿಲ್ಯಾಕ್ಸ್ ಆಗಿರುವುದಾಗಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹೇಳಿಕೆ ನೀಡಿದ್ದಾರೆ.