‘ಆಪರೇಷನ್’ ವೋಟರ್ ಐಡಿ ಹಗರಣ?: ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ‘ರಾಕಿಭಾಯ್’ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲವೆಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರು: ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
‘ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20 ಸಾವಿರ ರೂ. ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ. ಸಿಎಂ ಬೊಮ್ಮಾಯಿಯವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
"ನನ್ನ ಹೆಸರಿಗೆ ಮಸಿ ಬಳಿಯಲು ಹೊಂಚು ಹಾಕುತ್ತಿರುವವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ"
ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಬೊಮ್ಮಾಯಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.