ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಬೊಮ್ಮಾಯಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ
ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ‘ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಕ್ಷಣವೇ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ.
"ನಾನು ಪ್ರಾರಂಭಿಸಿದ ಕೆಲಸಗಳು ನನ್ನ ಕಾಲದಲ್ಲೇ ಕಂಪ್ಲೀಟ್ ಆಗಬೇಕು"
ಹಿಂದೂ ಪದ ಕುರಿತ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಸವಾಲು!
‘ಸಿಎಂ ಬೊಮ್ಮಾಯಿ, ಬಿಬಿಎಂಪಿ ಆಯುಕ್ತರು ಹಾಗೂ ಇತರರ ವಿರುದ್ಧ ಇಂದೇ ದೂರು ದಾಖಲಿಸುತ್ತೇವೆ. ಈ ಕೂಡಲೇ ಬೊಮ್ಮಾಯಿ ಅವರನ್ನು ಬಂಧಿಸಬೇಕು. ಒಂದು ವೇಳೆ ಅವರ ವಿರುದ್ಧ FIR ದಾಖಲಿಸದಿದ್ದರೆ ಮುಂದಿನ ಕ್ರಮವನ್ನು ನಾವು ಕೈಗೊಳ್ಳುತ್ತೇವೆ’ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.