ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆ.29 ರವರೆಗೆ ಅವಕಾಶ
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುವ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು 2.50 ಲಕ್ಷ ರೂ. ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ, ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್.ಎಸ್.ಪಿ) ದಲ್ಲಿ ಫೆ. 29 ರ ಒಳಗಾಗಿ ಅಪ್‌ಲೋಡ್ ಮಾಡಬೇಕು.
ಇದನ್ನೂ ಓದಿ: ಮುನಿರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿ, ಹುಲಿಗಿ ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಧಾನಮಂತ್ರಿಗಳಿಂದ ಶಂಕುಸ್ಥಾಪನೆ
2023-24 ನೇ ಸಾಲಿನಲ್ಲಿ, ಇತರೆ ಇಲಾಖೆಗಳ (ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳು) ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುವದಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ