ಭೀಮಾ-ಕೋರೆಗಾಂವ್ ಹಿಂಸಾಚಾರ ವಿರೋಧಿಸಿ ಇಂದು ಹುಬ್ಬಳ್ಳಿ-ಧಾರವಾಡ ಬಂದ್
ಹುಬ್ಬಳ್ಳಿ-ಧಾರವಾಡ: ಭೀಮಾ-ಕೋರೆಗಾಂವ್ ಹಿಂಸಾಚಾರವನ್ನು ವಿರೋಧಿಸಿ ದಲಿತ ಸಂಘಟನೆಗಳು ಇಂದು ಹುಬ್ಬಳ್ಳಿ-ಧಾರವಾಡ ಬಂದ್'ಗೆ ಕರೆ ನೀಡಿದ್ದಾರೆ.
ಮಹಾರಾಷ್ಟ್ರದ ಭೀಮಾ ಕೊರೆಗಾಂವ್ನಲ್ಲಿ ದಲಿತರ ವಿರುದ್ಧ ಹಿಂಸಾಚಾರ ಮತ್ತು ವಿಯಪುರದ ಜಿಲ್ಲೆಯ ದಲಿತ ಹುಡುಗಿಯನ್ನು ಹತ್ಯೆಯನ್ನು ವಿರೋಧಿಸಿ ಈ ಬಂದ್'ಗೆ ಕರೆ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಘಟನೆಯ ಮುಖಂಡರು 2014 ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಂದಿನಿಂದ ದಲಿತರ ಮೇಲಿನ ದಾಳಿಯು ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.