ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಅನ್ನದಾತರ ಹೊಟ್ಟೆಗೆ ಹೊಡೆದ ಕಾಂಗ್ರೆಸ್ ಸರ್ಕಾರ, ಪಿಂಚಣಿ, ನರೇಗಾ ಹಣ ಸಾಲ ಮರುಪಾವತಿಗೆ ಹೊಂದಿಸದಂತೆ ಸರ್ಕಾರ ಆದೇಶ ನೀಡಲಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

Written by - Prashobh Devanahalli | Last Updated : May 17, 2024, 11:54 AM IST
  • ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು.
  • ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು.
  • ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ
ಬ್ಯಾಂಕುಗಳು ಒಪ್ಪದಿದ್ದರೆ ಸಾಲ ಮನ್ನಾ ಮಾಡಿ, ರೈತರಿಗೆ ವಿಶೇಷ ಸಹಾಯಧನ ನೀಡಿ:  ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ title=

R Ashok: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು (Chief Minister Siddaramaiah) ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ. ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ  (Farmers) ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ: ಪ್ರತಿಪಕ್ಷ ನಾಯಕ ಆರ್.ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ (A meeting of bank officers) ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು‌. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ (Farmers loan waiver)  ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರ ಪ್ರವಾಹ ವಿಕೋಪದಿಂದ ಹಾನಿಗೊಳಗಾದವರಿಗೆ ದುಪ್ಪಟ್ಟು ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯದ ಪಾಲನ್ನೂ ನೀಡಲಾಗಿತ್ತು. ಈಗ ಪಾಪರ್ ಆಗಿ ಖಾಲಿ ಖಜಾನೆಯಲ್ಲಿ ಚಿಲ್ಲರೆ ಎಷ್ಟು ಉಳಿದಿದೆ ಎಂದು ಎಣಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಕ್ಕೂ ಮಿಡಿಯದೆ ಸುಮ್ಮನಿದ್ದಾರೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ- ಅಪರೂಪದ ಶಸ್ತ್ರಚಿಕಿತ್ಸೆ: ಲಿವರ್ ಟ್ರಾನ್ಸಪ್ಲಾಂಟೇಶನ್ ಮೂಲಕ ಹೆಣ್ಣು ಶಿಶುವಿನ ಜೀವ ಉಳಿಸಿದ ವೈದ್ಯರು

ಸಹಾಯಧನ ಘೋಷಿಸಿ:
ಕಳೆದ ವರ್ಷ ಹಿಂಗಾರು, ಮುಂಗಾರು ಎರಡೂ ಕೈ ಕೊಟ್ಟಿದ್ದರಿಂದ ಈ ವರ್ಷ ರೈತರ ಬಳಿ ಬಿತ್ತನೆ ಬೀಜ, ರಸಗೊಬ್ಬರ ಕೊಳ್ಳಲು, ಉಳುಮೆ ಮಾಡಲೂ ಸಹ ಹಣವಿಲ್ಲದ ಪರಿಸ್ಥಿತಿ ಇದೆ. ಆದ್ದರಿಂದ ಈ ಕೂಡಲೇ ಎಕರೆಗೆ 5,000 ರೂ. ನಂತೆ ರೈತರಿಗೆ ವಿಶೇಷ ಸಹಾಯಧನ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಈ ಬಾರಿಯೂ ಕೃಷಿ ಬೆಳೆಗಳು ಕೈ ಕೊಟ್ಟು ಆಹಾರ ಪದಾರ್ಥಗಳ ಕೊರತೆಯಿಂದ ಹಣದುಬ್ಬರ ಉಂಟಾಗಿ ತೀವ್ರ ಬೆಲೆ ಏರಿಕೆ ಆಗುವುದು ನಿಶ್ಚಿತ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ರೈತರ ಸಮಸ್ಯೆಗಳಿಗೆ ಸ್ಪಂದಿಸಿ ನಾಡಿನ ಕೃಷಿ ಚಟುವಟಿಕೆಯನ್ನು ಉಳಿಸಬೇಕು ಎಂದು ಆರ್.ಅಶೋಕ ಆಗ್ರಹಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News