ಬೆಂಗಳೂರು: 2 ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.


COMMERCIAL BREAK
SCROLL TO CONTINUE READING

#AnswerMadiModi ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪ್ರಧಾನಿ ಮೋದಿಯರಿಗೆ ಹತ್ತು-ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.


ಯೋಗ ದಿನಕ್ಕೆ ಅರಮನೆ ನಗರಿ ಸರ್ವಸಜ್ಜು.. ಪಿಎಂ ಆಗಮನ ಹಿನ್ನೆಲೆ ಮೈಸೂರಲ್ಲಿ‌ ಹೈ ಅಲರ್ಟ್


GST, ಮೂಲ ಸೌಕರ್ಯ, ಕುಡಿಯುವ ನೀರು, ಭಾಷೆ, ರೈಲ್ವೆ ಯೋಜನೆಗಳು, ಡಾ.ಬಿ.ಆರ್.ಅಂಬೇಡ್ಕರ್ ಶಾಲೆ, ಕೃಷಿ ಕಾಯ್ದೆಗಳು, ಗುತ್ತಿಗೆ ಕಾಮಗಾರಿಗಳಲ್ಲಿನ ಅಕ್ರಮ ಹಾಗೂ ಯುವಕರಿಗೆ ಉದ್ಯೋಗ  ಸಂಬಂಧಿಸಿದಂತೆ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ತಮ್ಮ ಸರಣಿ ಪ್ರಶ್ನೆಗಳು ‘ಉತ್ತರ ಹೇಳಿ ಮೋದಿ’ ಎಂದು ಸಿದ್ದರಾಮಯ್ಯನವರು ಒತ್ತಾಯಿಸಿದ್ದಾರೆ.


ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ


2 ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿಯವರು ಸೋಮವಾರ ಯಲಹಂಕದ ವಾಯುನೆಲೆಗೆ ಬಂದಿಳಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ‍್ಯಕ್ಷ ನಳೀನ್ ಕುಮಾರ್ ಕಟೀಲ್ ಮುಂತಾದ ಬಿಜೆಪಿ ನಾಯಕರು ಆತ್ಮೀಯ ಸ್ವಾಗತ ಕೋರಿದರು.


ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್ ರಿಂದ ಸ್ವಾಗತ


ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ತೆರಳಿ ‘ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.