ನ್ಯಾಯಾಂಗ ತನಿಖೆ ನಡೆಸಿದ್ರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ: ಸಿದ್ದರಾಮಯ್ಯ
ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು 40% ಕಮಿಷನ್ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರವೇ ನಡೆದಿಲ್ಲವೆಂದು ಬೊಬ್ಬಿರಿಯುವ ಬಿಜೆಪಿ ನಾಯಕರಿಗೆ ತಮ್ಮ ಪ್ರಾಮಾಣಿಕತೆ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ, ಒಂದು ವೇಳೆ ಸಾಬೀತುಪಡಿಸಲು ಆಗದಿದ್ದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾರಾದರೂ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಈ ಸವಾಲು ಸ್ವೀಕರಿಸಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಪ್ರಧಾನಿಗೆ ಬರೆದ ಪತ್ರವನ್ನು ನೋಡಿದ್ದು ಬಿಟ್ಟರೆ ಅವರ ಭೇಟಿ ಸಾಧ್ಯವಾಗಿರಲಿಲ್ಲ. ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಭೇಟಿಮಾಡಿ ಸಮಾಲೋಚನೆ ನಡೆಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
40% ಸರ್ಕಾರದ ಬಿಜೆಪಿ ಭ್ರಷ್ಟೋತ್ಸವ ನಿಲ್ಲುವುದು ಯಾವಾಗ?: ಕಾಂಗ್ರೆಸ್ ಪ್ರಶ್ನೆ
‘ರಾಜ್ಯ ಬಿಜೆಪಿ ಸರ್ಕಾರ ಕಳೆದ ಏಪ್ರಿಲ್ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಈವರೆಗೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕೆಂದು ಗುತ್ತಿಗೆದಾರರ ಸಂಘದವರು ನನಗೆ ಮನವಿ ಮಾಡಿದ್ದರು. ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗೆ ಪತ್ರ ಬರೆದು 1 ವರ್ಷವಾದರೂ ಯಾವ ಕ್ರಮ ಕೈಗೊಂಡಿಲ್ಲ. ನ್ಯಾಯಾಂಗ ತನಿಖೆಗೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿ ಎಂದು ಇಂದು ಕೆಂಪಣ್ಣನವರು ನನ್ನ ಬಳಿ ಕೇಳಿಕೊಂಡಿದ್ದಾರೆ’ ಅಂತಾ ಅವರು ಹೇಳಿದ್ದಾರೆ.
BC Nagesh : 2023ರ ಫೆಬ್ರವರಿಯಲ್ಲಿ ಶಿಕ್ಷಕರ ಹುದ್ದೆಗೆ ಮತ್ತೆ ಸಿಇಟಿ ಪರೀಕ್ಷೆ : ಬಿಸಿ ನಾಗೇಶ್
ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.