ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು: ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದುಕೊಂಡು, ತಕ್ಷಣ ಅದರ ಶಿಫಾರಸು ಜಾರಿಗೆ ಕೊಡುವ ಕೆಲಸ ಮಾಡಬೇಕು. ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Mar 1, 2023, 03:35 PM IST
  • ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು, ಶಿಫಾರಸು ಜಾರಿ ಮಾಡಬೇಕು
  • ಬಿಜೆಪಿ ಸರ್ಕಾರದಿಂದ ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ
  • ಬಿಜೆಪಿಯವರಂತೆ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ನಾವು ಮಾಡಿಲ್ಲವೆಂದ ಸಿದ್ದರಾಮಯ್ಯ
ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು: ಸಿದ್ದರಾಮಯ್ಯ  title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ರಾಜ್ಯ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.  

‘ರಾಜ್ಯ ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡು, ತಕ್ಷಣ ಅದರ ಶಿಫಾರಸುಗಳನ್ನು ಜಾರಿಗೆ ಕೊಡುವ ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದಿಂದ ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಇಂದಿನಿಂದ ಬಿಜೆಪಿ ರಥಯಾತ್ರೆ- ಮಲೆ ಮಹದೇಶ್ವರ ಬೆಟ್ಟದಿಂದ ಜೆಪಿ ನಡ್ಡಾ ಚಾಲನೆ

‘ಈ ಹಿಂದೆ 6ನೇ ವೇತನ ಆಯೋಗ ರಚನೆ ಮಾಡಿ, ರಾಜ್ಯದ ಬೊಕ್ಕಸದಿಂದ 10,600 ಕೋಟಿ ರೂ. ಹೆಚ್ಚುವರಿಯಾಗಿ ನೀಡಿ ಜಾರಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಬಿಜೆಪಿಯವರಂತೆ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ನಾವು ಮಾಡಿದವರಲ್ಲ’ವೆಂದು ಅವರು ಹೇಳಿದ್ದಾರೆ.

‘ಚುನಾವಣೆಗೆ ಮುಂಚಿತವಾಗಿ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ಕೊಟ್ಟು ನಮ್ಮ ಬದ್ಧತೆಯನ್ನು ತೋರಿಸಿದ್ದೆವು. ರಾಜ್ಯ ಬಿಜೆಪಿ ಸರ್ಕಾರಕ್ಕೆ ಸರ್ಕಾರಿ ನೌಕರರ ಬಗ್ಗೆ ಕಾಳಜಿ, ಆಡಿದ ಮಾತಿನಂತೆ ನಡೆದುಕೊಳ್ಳುವ ಇಚ್ಛಾಶಕ್ತಿ ಎರಡೂ ಇಲ್ಲ. ಈ ಸರ್ಕಾರ ನೀತಿ ಸಂಹಿತೆ ಜಾರಿಯಾಗಲೆಂದು ದಿನ ದೂಡುತ್ತಿದೆ’ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: Gas prices hike: ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ "ಐಷಾರಾಮಿ ಜೀವನ"- ಕಾಂಗ್ರೆಸ್ ಟೀಕೆ

‘ಪರೀಕ್ಷೆ ನಡೆಯದೆ ವಿದ್ಯಾರ್ಥಿಗಳ ಭವಿಷ್ಯ ಆತಂಕದಲ್ಲಿದೆ, ಹೊರರೋಗಿ ವಿಭಾಗಗಳು ಬಂದ್ ಆಗಿ ರೋಗಿಗಳ ಜೀವ ಅಪಾಯದಲ್ಲಿದೆ, ಸರ್ಕಾರಿ ಸೇವೆಗಳು ಲಭ್ಯವಿಲ್ಲದ ಜನ ಕಂಗಾಲಾಗಿದ್ದಾರೆ. ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೂ ರಾಜ್ಯ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News