ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು: ಸಿದ್ದರಾಮಯ್ಯ
ರಾಜ್ಯ ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದುಕೊಂಡು, ತಕ್ಷಣ ಅದರ ಶಿಫಾರಸು ಜಾರಿಗೆ ಕೊಡುವ ಕೆಲಸ ಮಾಡಬೇಕು. ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಮುಂದೆ ಸಂಭವಿಸುವ ಎಲ್ಲಾ ಅವಘಡಗಳಿಗೆ ರಾಜ್ಯ ಬಿಜೆಪಿ ಸರ್ಕಾರವೇ ಹೊಣೆ ಹೊರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
‘ರಾಜ್ಯ ಬಿಜೆಪಿ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡು, ತಕ್ಷಣ ಅದರ ಶಿಫಾರಸುಗಳನ್ನು ಜಾರಿಗೆ ಕೊಡುವ ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದಿಂದ ಇದು ಸಾಧ್ಯವಾಗದಿದ್ದರೆ ನಾವು ಅಧಿಕಾರಕ್ಕೆ ಬಂದ ಕೂಡಲೆ ಜಾರಿ ಮಾಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇಂದಿನಿಂದ ಬಿಜೆಪಿ ರಥಯಾತ್ರೆ- ಮಲೆ ಮಹದೇಶ್ವರ ಬೆಟ್ಟದಿಂದ ಜೆಪಿ ನಡ್ಡಾ ಚಾಲನೆ
‘ಈ ಹಿಂದೆ 6ನೇ ವೇತನ ಆಯೋಗ ರಚನೆ ಮಾಡಿ, ರಾಜ್ಯದ ಬೊಕ್ಕಸದಿಂದ 10,600 ಕೋಟಿ ರೂ. ಹೆಚ್ಚುವರಿಯಾಗಿ ನೀಡಿ ಜಾರಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಬಿಜೆಪಿಯವರಂತೆ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ನಾವು ಮಾಡಿದವರಲ್ಲ’ವೆಂದು ಅವರು ಹೇಳಿದ್ದಾರೆ.
Gas prices hike: ಅಚ್ಛೆ ದಿನಗಳಲ್ಲಿ ಅನ್ನ ಬೇಯಿಸಿ ತಿನ್ನುವುದೂ "ಐಷಾರಾಮಿ ಜೀವನ"- ಕಾಂಗ್ರೆಸ್ ಟೀಕೆ
ಸಿದ್ದರಾಮಯ್ಯ ಕುಟುಕಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.