Mekedatu Project: ‘ಪರಿಸರ ಇಲಾಖೆ ಅನುಮತಿ ಪಡೆಯಲು ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ’

ಮೇಕೆದಾಟು ಯೋಜನೆ ಜಾರಿಗೆ ಈ ತಿಂಗಳ 27 ರಿಂದ ನಮ್ಮ ‘ನೀರಿಗಾಗಿ ನಡಿಗೆ’ ಪಾದಯಾತ್ರೆಯನ್ನು ಪುನರ್ ಆರಂಭ ಮಾಡುತ್ತಿದ್ದೇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.

Written by - Zee Kannada News Desk | Last Updated : Feb 26, 2022, 08:48 AM IST
  • ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಪಡೆಯಲು ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ
  • ಬೆಂಗಳೂರು ನಗರದಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ ಮಾಡುತ್ತೇವೆ
  • ಮಾ.3ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ
Mekedatu Project: ‘ಪರಿಸರ ಇಲಾಖೆ ಅನುಮತಿ ಪಡೆಯಲು ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ’ title=
ಬೆಂಗಳೂರಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ

ಬೆಂಗಳೂರು: ಮೇಕೆದಾಟು ಯೋಜನೆ(Mekedatu Project) ಜಾರಿಗೆ ಬೇಕಾದ ಒಂದು ಪರಿಸರ ಅನುಮತಿ ಪಡೆಯಲು ಕಳೆದ ಎರಡೂವರೆ ವರ್ಷಗಳಿಂದ ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ(Mekedatu Padayatra) ವಿಚಾರವಾಗಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಈ ತಿಂಗಳ 27 ರಿಂದ ನಮ್ಮ ‘ನೀರಿಗಾಗಿ ನಡಿಗೆ’ ಪಾದಯಾತ್ರೆಯನ್ನು ಪುನರ್ ಆರಂಭ ಮಾಡುತ್ತಿದ್ದೇವೆ. ಕಳೆದ ಬಾರಿಯಂತೆ ಈ ಸಲವೂ ತಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಮ್ಮೊಂದಿಗೆ ಹೆಜ್ಜೆ ಹಾಕಬೇಕೆಂದು ಮನವಿ ಮಾಡುತ್ತೇನೆ’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ʼನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

‘ನಮ್ಮ ಸರ್ಕಾರ ಮೇಕೆದಾಟು ಯೋಜನೆಗೆ 2017ರಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಿ, ಕೇಂದ್ರ ಜಲಮಂಡಳಿಗೆ ನೀಡಿತ್ತು. ಅವರು ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಕ್ಕೆ ವಾಪಾಸು ಕಳಿಸಿದ್ದರು. ಕೇಂದ್ರ ಜಲಮಂಡಳಿ ಕೇಳಿದ್ದ ಸ್ಪಷ್ಟೀಕರಣಕ್ಕೆ ಸಮ್ಮಿಶ್ರ ಸರ್ಕಾರದ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಸೂಕ್ತ ಮಾಹಿತಿ ಒದಗಿಸಿದ್ದರು ಮತ್ತು ಪರಿಷ್ಕೃತ ಯೋಜನಾ ವರದಿಯನ್ನೂ ಸಿದ್ಧಪಡಿಸಿ ಕಳಿಸಿದ್ದರು’ ಅಂತಾ ಸಿದ್ದರಾಮಯ್ಯ(Siddaramaiah) ಟ್ವೀಟ್ ಮಾಡಿದ್ದಾರೆ.

‘ಮೇಕೆದಾಟು ಯೋಜನೆ ಜಾರಿಗೆ ಬೇಕಾದ ಒಂದು ಪರಿಸರ ಅನುಮತಿ ಪಡೆಯಲು ಕಳೆದ ಎರಡೂವರೆ ವರ್ಷಗಳಿಂದ ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ(BJP Government)ಕ್ಕೆ ಸಾಧ್ಯವಾಗಿಲ್ಲ. ಈ ಸರ್ಕಾರಕ್ಕೆ ಜನರ ಹಿತಾಸಕ್ತಿ ಮುಖ್ಯವಲ್ಲ. ಬೆಂಗಳೂರು ನಗರದ ಶೇ.25ಕ್ಕೂ ಹೆಚ್ಚು ಜನರಿಗೆ ಕಾವೇರಿ ನೀರು ಲಭ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ನಗರಕ್ಕೆ ಮುಂದಿನ 50 ವರ್ಷಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇರಲ್ಲ. ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು’ ಅಂತಾ ಹೇಳಿದ್ದಾರೆ.

ಇದನ್ನೂ ಓದಿ: 'ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು'

‘ಬೆಂಗಳೂರು ನಗರದಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ ಮಾಡುತ್ತೇವೆ. ಮಾರ್ಚ್ 3 ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ ಮಾಡುತ್ತೇವೆ. ಪಾದಯಾತ್ರೆ(Mekedatu Congress Padayatra)ಯ ಯಶಸ್ಸಿಗೆ ತಮ್ಮೆಲ್ಲರ ಸಹಕಾರ ಅಗತ್ಯ. ತಮಿಳುನಾಡಿಗೆ(Tamil Nadu) ಅವರ ಪಾಲಿನ ನೀರು ಕೊಡುವುದಾಗಿ ಒಪ್ಪಿಕೊಂಡಿದ್ದೇವೆ. ಯೋಜನೆ ಬಗ್ಗೆ ತಕರಾರು ಮಾಡಲು ಅವರಿಗೆ ಯಾವುದೇ ಕಾನೂನಾತ್ಮಕ ಹಕ್ಕಿಲ್ಲ. ಕಾವೇರಿ ವಿವಾದವನ್ನು ಜೀವಂತವಾಗಿಡಲು ಅಲ್ಲಿನ ಎಲ್ಲಾ ಪಕ್ಷಗಳು ಪ್ರಯತ್ನ ಮಾಡುತ್ತಿವೆ’ ಅಂತಾ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News