ಬೆಂಗಳೂರು: ಕೇಂದ್ರ ಸರ್ಕಾರವು ಆಹಾರ ಪದಾರ್ಥಗಳ ಮೇಲೆ ಶೇ.5ರಷ್ಟು ಜಿಎಸ್ಟಿ ವಿಧಿಸಿರುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದು ಆಹಾರ ಪದಾರ್ಥಗಳ ಮೇಲಿನ GSTಗೆ ವಿರೋಧ ವ್ಯಕ್ತಪಡಿಸಿದ್ದಾರೆ.
‘ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ. ಈ ಕೂಡಲೇ ಇವುಗಳ ಮೇಲಿನ ಜಿಎಸ್ಟಿ ರದ್ದುಮಾಡುವಂತೆ ಸಿಎಂ ಬೊಮ್ಮಾಯಿಯವರು ಕೇಂದ್ರ ಬಿಜೆಪಿ ಸರ್ಕಾರವನ್ನು ಒತ್ತಾಯಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಎಲ್ಲರಿಗೂ ಸಿಎಂ ಆಗಬೇಕೆನ್ನುವ ಆಸೆ ಇರುತ್ತದೆ: ಜೆ.ಸಿ ಮಧುಸ್ವಾಮಿ
ಕೇಂದ್ರ ಸರ್ಕಾರವು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5 ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ.
ಈ ಕೂಡಲೇ ಇವುಗಳ ಮೇಲಿನ ಜಿಎಸ್ಟಿ ರದ್ದುಮಾಡುವಂತೆ @CMofKarnataka ಅವರು ಕೇಂದ್ರ @BJP4India ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸುತ್ತೇನೆ. pic.twitter.com/noaBfg0Stx— Siddaramaiah (@siddaramaiah) July 16, 2022
‘ಕೇಂದ್ರ ಸರ್ಕಾರದ ತಲೆಕೆಳಗಾದ ಆರ್ಥಿಕ ನೀತಿಗಳಿಂದ ದೇಶದ ದುಡಿಯುವ ವರ್ಗಗಳು ಹೈರಾಣಾಗಿವೆ. ಈ ಹೊತ್ತಲ್ಲಿ ಕೇಂದ್ರ ಸರ್ಕಾರ ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5ರಷ್ಟು ಜಿಎಸ್ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿ. ಮಂಡಕ್ಕಿ ಭಟ್ಟಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರಿಗೆ ಎರಡೂ ಹೊತ್ತಿನ ಊಟಕ್ಕೆ ಆಗುವಷ್ಟೂ ಗಳಿಕೆ ಇರುವುದಿಲ್ಲವೆನ್ನುವ ಕಾಮನ್ ಸೆನ್ಸ್ ಕೂಡ ಡಬ್ಬಲ್ ಎಂಜಿನ್ ಸರ್ಕಾರಗಳಿಗೆ ಇದ್ದಂತಿಲ್ಲ. ಬಿಜೆಪಿ ಸರ್ಕಾರ ದೇಶದ ಜನತೆಯನ್ನು ಶತ್ರುಗಳೆಂದು ಭಾವಿಸಿ ಕೆಲಸ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಮಂಡಕ್ಕಿ ಮತ್ತಿತರ ಬಡವರ ಆಹಾರದ ಮೇಲಿನ ಜಿಎಸ್ಟಿಯನ್ನು ತಕ್ಷಣದಿಂದಲೇ ರದ್ದುಗೊಳಿಸಲು ಕೂಡಲೇ ಒತ್ತಾಯಿಸಬೇಕೆಂದು’ ಸಿದ್ದರಾಮಯ್ಯನವರು ಪತ್ರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ದಾಖಲೆ ಪರಿಶೀಲನೆಗೆ ಸುಖಾಸುಮ್ಮನೆ ವಾಹನ ತಡೆಯದಂತೆ ಪ್ರವೀಣ್ ಸೂದ್ ಆದೇಶ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.