ಬೆಂಗಳೂರು: RSS ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ RSS ಕಂಡರೆ ಭಯ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

#AryanRSS ಹ್ಯಾಶ್ ಟ್ಯಾಗ್ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ‌ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು’ ಎಂದು ಟ್ವೀಟ್ ಮಾಡಿದ್ದಾರೆ.


ಗಣಿಗಾರಿಕೆ ಆರೋಪ: ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲು!


‘RSS ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ RSS ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ RSS ಬಗ್ಗೆ ಭಯ ಇದೆ’ ಎಂದು ಹೇಳಿದ್ದಾರೆ.


ಸಚಿವ ಬಿ.ಸಿ.ನಾಗೇಶ್ ಮನೆಮೇಲೆ ದಾಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ


ಹಿಂದುಳಿದ ಜಾತಿಗಳಿಲ್ಲ?‌ ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ?’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.