ಪರಿಷ್ಕೃತ ಪಠ್ಯಕ್ಕೆ ಸುಳ್ಳಿನ ಸಮರ್ಥನೆ ನಾಚಿಕೆಗೇಡು: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರವು ತಾನೇ ಮಾಡಿಕೊಂಡಿರುವ ಎಡವಟ್ಟುಗಳನ್ನು ಗೌರವಯುತವಾಗಿ ಒಪ್ಪಿಕೊಂಡು ಪರಿಷ್ಕೃತ ಪಠ್ಯವನ್ನು ತಿರಸ್ಕರಿಸಬೇಕಿತ್ತು. ಅದರ ಬದಲು, ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಿಸಿರುವ ಪಠ್ಯಪುಸ್ತಕಗಳನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ’ವೆಂಬ ಹೇಳಿಕೆ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್‍ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: 'ಅವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ?'
‘ಕಂದಾಯ ಸಚಿವ ಆರ್.ಅಶೋಕ್ ಹೇಳಿರುವ ಸುಳ್ಳುಗಳನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಬೇಕು. ಇಲ್ಲವಾದರೆ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಹೈಕೋರ್ಟ್ ಲೋಕ ಅದಾಲತ್ 4 ಕೋಟಿ ರೂ.ಗಳಿಗೂ ಅಧಿಕ ಮೊತ್ತದ 221 ಪ್ರಕರಣಗಳ ಇತ್ಯರ್ಥ
‘ಬರಗೂರು ರಾಮಚಂದ್ರಪ್ಪ ಮೂಲಕ ಸಿದ್ದರಾಮಯ್ಯ ಪಠ್ಯಪುಸ್ತಕಗಳಲ್ಲಿ ಕಮ್ಯುನಿಸ್ಟ್ ಸಿದ್ಧಾಂತ ಹೇರಿದ್ದರು. ಹಿಂದೂ ಧರ್ಮ, ಹಿಂದೂ ಅಸ್ಮಿತೆಯ ಪದಗಳು, ರಾಮಾಯಣ, ಮಹಾಭಾರತದ ಅಂಶಗಳು, ಈಶ್ವರ, ರಾಮ, ಕೃಷ್ಣರ ಕುರಿತು ಇದ್ದ ಅಂಶಗಳು ಮತ್ತು ಹೆಸರುಗಳನ್ನೂ ಪಠ್ಯಪುಸ್ತಕಗಳಿಂದ ತೆಗೆಸಿ ಹಾಕಿದ್ದರು. ಹಿಂದೂ ರಾಜರು, ಚಕ್ರವರ್ತಿಗಳನ್ನು ಕಡೆಗಣಿಸುವ ಮೂಲಕ ಟಿಪ್ಪು ಮತ್ತು ಮೊಗಲರನ್ನು ವೈಭವೀಕರಿಸಿದ್ದರು. ತಮ್ಮ ಸೈದ್ಧಾಂತಿಕ ಕಾರ್ಯಸೂಚಿಗೆ ಹೊಂದದ ವ್ಯಕ್ತಿಗಳು ಮತ್ತು ವಿಷಯಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಿದ್ದರು’ ಎಂದು ಸಚಿವ ಆರ್.ಅಶೋಕ್ ಆರೋಪ ಮಾಡಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.