ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ: ಸಿದ್ದರಾಮಯ್ಯ
ಲೋಕೋಪಯೋಗಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸೇರಿ 22,000 ಕೋಟಿ ಬಿಲ್ ಹಣ ಬಿಡುಗಡೆಗೆ ಬಾಕಿ ಇದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ. ಅವರಿಗೆ ಧೈರ್ಯವಿದ್ದರೆ ನಮ್ಮ ಪಕ್ಷದ ವಕ್ತಾರ ಲಕ್ಷ್ಮಣ್ ಸೇರಿದಂತೆ ಅನೇಕರು ಹಾಕಿರುವ ಸವಾಲನ್ನು ಸ್ವೀಕರಿಸಿ ಚರ್ಚೆಗೆ ಬರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಮುಖ್ಯಮಂತ್ರಿಯಾಗಿ ನಾನು ಮೈಸೂರಿಗೆ ಏನು ಮಾಡಿದ್ದೇನೆ? ಪ್ರತಾಪ್ ಸಿಂಹ ಏನು ಮಾಡಿದ್ದಾರೆ? ಎಂದು ಚರ್ಚೆಯಾಗಲಿ’ ಅಂತಾ ಹೇಳಿದ್ದಾರೆ.
‘ಸಿಎಂ ಬೊಮ್ಮಾಯಿ ಸರ್ಕಾರದಲ್ಲಿರುವವರೆಲ್ಲರೂ ಸತ್ಯಹರಿಶ್ಚಂದ್ರರಾಗಿದ್ದರೆ ತನಿಖೆಗೆ ಯಾಕೆ ಹೆದರಿಕೊಳ್ಳುತ್ತಿದ್ದಾರೆ? ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಿ. ಆರೋಪಗಳು ಕೇಳಿಬಂದಾಗ ತನಿಖೆ ನಡೆಸಿ ಸತ್ಯಾಸತ್ಯತೆ ಜನತೆಯ ಮುಂದಿಡುವುದು ಸರ್ಕಾರದ ಕರ್ತವ್ಯ. ಕಮಿಷನ್ ಹಾವಳಿಗೆ ಬೇಸತ್ತ ಗುತ್ತಿಗೆದಾರರು ಕಳೆದ ವರ್ಷವೇ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಇದರ ನಂತರ ಸಮಸ್ಯೆ ಬಗೆಹರಿದಿಲ್ಲ, ಕಿರುಕುಳ ಹೆಚ್ಚಾಗಿದೆಯಂತೆ. ತನಿಖೆಗೆ ಆದೇಶಿಸಿದರೆ ಎಲ್ಲ ಪುರಾವೆಗಳನ್ನು ಕೊಡಲು ಸಿದ್ಧನಿದ್ದೇನೆಂದು ಸಂಘದ ಅಧ್ಯಕ್ಷರೇ ಹೇಳಿರುವಾಗ ಬಿಜೆಪಿ ಸರ್ಕಾರ ಯಾಕೆ ಒಪ್ಪುತ್ತಿಲ್ಲ?’ ಅಂತಾ ಪ್ರಶ್ನಿಸಿದ್ದಾರೆ.
ಗೃಹಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು
ಬಿಜೆಪಿ ಸರ್ಕಾರದವರು ಅವರಿಗೆ ಅವಕಾಶ ಕೊಟ್ಟಿದ್ದಾರೆ. 3 ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ತನ್ನ ಸರ್ಕಾರದ ಸಾಧನೆ ಬಗ್ಗೆ ಮಾತನಾಡಬೇಕು. ಆದರೆ ಬಿಜೆಪಿ ನಾಯಕರು ಹಲಾಲ್, ಹಿಜಾಬ್, ಮೀನು-ಮಾಂಸ, ಸಾವರ್ಕರ್, ಜಾತಿ-ಧರ್ಮದ ಬಗ್ಗೆ ಮಾತನಾಡುತ್ತಿದ್ದಾರೆ. ಇದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆಡೆ ಸೆಳೆಯುವ ಕುತಂತ್ರ’ವೆಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸಿದ್ದರಾಮಯ್ಯನವರ ಕಿರಿಯ ಸಹೋದರ ಶ್ರೀ ರಾಮೇಗೌಡ ಇನ್ನಿಲ್ಲ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.