ಬೆಂಗಳೂರು: 4 ದಶಕಗಳ ಕಾಲ ರಕ್ತ-ಬೆವರು ಹರಿಸಿ ಪಕ್ಷ ಕಟ್ಟಿದ್ದ ಬಿ.ಎಸ್.ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿದವರು ಯಾರು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪ್ರಶ್ನಿಸಿದ್ದಾರೆ. ಖರ್ಗೆ, ಪರಮೇಶ್ವರ್ ಮುಗಿಸಿರುವ ಸಿದ್ದು ಮುಂದಿನ ಗುರಿ ಡಿಕೆಶಿ. ಸಿದ್ದರಾಮೋತ್ಸವದಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

#ಒಡೆದಮನೆಬಿಜೆಪಿ ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಪಕ್ಷ ಅಧಿಕಾರದಲ್ಲಿದ್ದಾಗಲೇ ಬಿಎಸ್‍ವೈಯನ್ನು ಜೈಲಿಗೆ ಕಳಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರ? ನೀವೂ ಅದರಲ್ಲಿ ಷಾಮೀಲಾಗಿಲ್ಲವೇ? ಯಡಿಯೂರಪ್ಪರಿಗೆ ಸಿಎಂ ಸ್ಥಾನದ ಆಸೆ ತೋರಿಸಿ, ಅವರಿಂದಲೇ ‘ಆಪರೇಷನ್ ಕಮಲ’ ಮಾಡಿಸಿದ್ದು ಯಾರು? ಕೊನೆಗೆ ಅವರನ್ನೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತು ಹಾಕಿದ್ದು ಯಾರು? ಕೈಗೆ ಬಂದದ್ದು ಬಾಯಿಗೆ ಬಾರದೆ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ? ಎಂದು ಜೋಶಿಗೆ ಪ್ರಶ್ನಿಸಿದ್ದಾರೆ.


ವ್ಯಾಪಾರಿ ಮನೋಭಾವದ ಶಿಕ್ಷಣ ಸಚಿವರನ್ನು ವಜಾಗೊಳಿಸಿ: ಮೋದಿಗೆ ಪತ್ರ ಬರೆದ ರುಪ್ಸಾ


Bangalore Crime : ಮನೆಗೆಲಸ‌ ಮಾಡುವ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಬಾಂಬೆ ಲೇಡಿ ಗ್ಯಾಂಗ್ ಅರೆಸ್ಟ್!


ಆಪರೇಷನ್ ಕಮಲ’ದ ಹೊಲಸು ದಂಧೆ. ಎದುರಿಗಿದ್ದವರ ಊಟದೆಲೆಯ ಮೇಲಿನ ಸತ್ತ ನೊಣವನ್ನು ಹುಡುಕುವ ಚಾಳಿ ಬಿಡಿ, ನಿಮ್ಮ ಊಟದ ಎಲೆಯಲ್ಲಿ ಸತ್ತು ಬಿದ್ದಿರುವ ಆನೆಯನ್ನು ನೋಡಿ’ ಎಂದು ಪ್ರಹ್ಲಾದ್ ಜೋಶಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ