ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದ ಸಿದ್ದರಾಮಯ್ಯ
ನಮ್ಮ ಸರ್ಕಾರದ ಕಾಲದಲ್ಲಿ ಯಾರೋ ಪೊಲೀಸ್ ಅಧಿಕಾರಿಯೊಬ್ಬರು ಆರೋಪ ಹೊರಿಸಿದಾಗ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ ಶೇ.40ರಷ್ಟು ಕಮಿಷನ್ ಆರೋಪ ಮಾಡಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೇ ವಿಚಾರವಾಗಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಇದು ಆತ್ಮಹತ್ಯೆ ಅಲ್ಲ, ಕೊಲೆ’ ಎಂದು ಹೇಳಿದ್ದಾರೆ.
#MurderByBJP ಹ್ಯಾಶ್ ಟ್ಯಾಗ್ ಬಳಸಿರುವ ಸಿದ್ದರಾಮಯ್ಯ, ‘ಗುತ್ತಿಗೆದಾರನ ಆತ್ಮಹತ್ಯೆಯ ಆರೋಪಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಕ್ಷಣ ಸಂಪುಟದಿಂದ ಕಿತ್ತುಹಾಕಿ ಅವರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು. ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ
‘ನಮ್ಮ ಸರ್ಕಾರದ ಕಾಲದಲ್ಲಿ ಯಾರೋ ಪೊಲೀಸ್ ಅಧಿಕಾರಿಯೊಬ್ಬರು ಆರೋಪ ಹೊರಿಸಿದಾಗ ಸಚಿವರಾಗಿದ್ದ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿಲ್ಲವೇ? ಆಗ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕೆಂದು ಇದೇ ಬಿಜೆಪಿ ನಾಯಕರು ಆಕಾಶ-ಭೂಮಿ ಒಂದು ಮಾಡಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ಬೆಲೆ ಏರಿಕೆ ಮಾಡುವುದು ನಿಮ್ಮ ಜನ್ಮಸಿದ್ದ ಹಕ್ಕೇ?: ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ
ಪ್ರಧಾನಿ ಮೋದಿ ಅವರಿಂದ ಹಿಡಿದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರೆಗೆ ಎಲ್ಲರಿಗೂ ಪತ್ರ ಬರೆದಿದ್ದರು. ಹೀಗಿದ್ದರೂ ಅವರಿಗೆ ನ್ಯಾಯ ಸಿಗಲಿಲ್ಲ. ಆದ್ದರಿಂದ ಇವರೆಲ್ಲರ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.