ಸದನ ಪ್ರಾರಂಭಕ್ಕಿಂತಲೂ ಮೊದಲೇ ವರಿಷ್ಠರಿಂದ ವಿಪಕ್ಷ ನಾಯಕನ ಘೋಷಣೆ: ಬಿಜೆಪಿ
BJP vs Congress: ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲವೆಂದು ಬಿಜೆಪಿ ಕುಟುಕಿದೆ.
ಬೆಂಗಳೂರು: ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೇ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ ಎಂದು ಬಿಜೆಪಿ ಹೇಳಿಕೊಂಡಿದೆ. ವಿಧಾನಸಭಾ ಚುನಾವಣೆ ಮುಗಿದು 45 ದಿನಗಳ ಮೇಲಾದರೂ ಬಿಜೆಪಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಈ ವಿಚಾರವಾಗಿ ಕಾಂಗ್ರೆಸ್ ನಿರಂತರವಾಗಿ ಬಿಜೆಪಿಯನ್ನು ಕೆಣಕುತ್ತಿದ್ದು, ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆಂದು ಟೀಕಿಸುತ್ತಿದೆ.
ಇದೇ ವಿಚಾರವಾಗಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಬಹುಮತ ದೊರೆತರೂ, ಮುಖ್ಯಮಂತ್ರಿ ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ನಡೆಸಿದ ಹಗ್ಗಜಗ್ಗಾಟವನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಇವರಿಂದ ಹೇಳಿಸಿಕೊಂಡು ಬುದ್ದಿ ಕಲಿಯುವ ಪರಿಸ್ಥಿತಿ ಯಾರಿಗೂ ಬಂದಿಲ್ಲ’ವೆಂದು ಕುಟುಕಿದೆ.
ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: 04 ಬಾಲಕಾರ್ಮಿಕರ ರಕ್ಷಣೆ
‘ಇಷ್ಟಕ್ಕೂ ಹೊಸದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಸಿದ್ದರಾಮಯ್ಯನವರು 2008ರಲ್ಲಿ ಅಂದಿನ ವಿಪಕ್ಷ ನಾಯಕನ ಸ್ಥಾನ ಮಲ್ಲಿಕಾರ್ಜುನ್ ಖರ್ಗೆಯವರಿಗೆ ದೊರೆತ ಕಾರಣ, ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಆ ಪಕ್ಷದ ಕೆಲವು ಶಾಸಕರು ರಾಜೀನಾಮೆ ನೀಡಿದಾಗಲೂ, ಆ ಶಾಸಕರ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಕಾಂತಿ ಕಣ್ಮುಚ್ಚಿ ಕಣ್ಣೀರು ತರಿಸಿದಳು...! ಇದು ಗ್ಯಾಂಗ್ ಲೀಡರ್ ಕಾಂತಿಯ ಇನ್‌ಸೈಡ್ ಕಹಾನಿ..
‘ನಮ್ಮ ವಿಪಕ್ಷ ನಾಯಕ ಸ್ಥಾನದ ಬಗ್ಗೆ ನಮ್ಮ ವರಿಷ್ಠರು ಸದನ ಪ್ರಾರಂಭಕ್ಕಿಂತಲೂ ಮೊದಲೇ, ಸೂಕ್ತ ಸಮಯದಲ್ಲಿ ಘೋಷಿಸುತ್ತಾರೆ. ಕಾಂಗ್ರೆಸ್ ಇದರ ಬಗ್ಗೆ ತಲೆ ಕೆರೆದುಕೊಳ್ಳುವುದನ್ನು ಬಿಟ್ಟು, ಅವಾಸ್ತವಿಕ ಗ್ಯಾರಂಟಿಗಳ ಅಪ್ರಬುದ್ಧ ಅನುಷ್ಠಾನದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ದವಾಗಿರುವ ನಮ್ಮ ಪಕ್ಷದ ಶಾಸಕರನ್ನು ಹೇಗೆ ಎದುರಿಸಬೇಕೆಂದು ತಮ್ಮ ಸರಕಾರಕ್ಕೆ ಸಲಹೆ ನೀಡಲಿ’ ಎಂದು ಬಿಜೆಪಿ ಹೇಳಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.