ಬೆಂಗಳೂರು: ದೇಶದ ಹಿತಾಸಕ್ತಿ ಕಾಯಲು ವಿರೋಧ ಪಕ್ಷಗಳು ಒಂದುಗೂಡುತ್ತಿರುವುದು ಉತ್ತಮ ಆರಂಭ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆಶಿವಕುಮಾರ್ ತಾಜ್ ವೆಸ್ಟ್ಎಂಡ್ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು
ಜತೆಗೂಡುವುದು ಆರಂಭ, ಜತೆಗೂಡಿ ಆಲೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು.
ದೇಶದ ಭವಿಷ್ಯವನ್ನು ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ನಾಳೆ ದೊಡ್ಡ ಮಟ್ಟದ ಸಭೆ ನಡೆಯಲಿದೆ. ಇದು ಕೇವಲ ಒಂದು ಪಕ್ಷದ ಸಭೆಯಲ್ಲ. ದೇಶದ 140 ಕೋಟಿ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಪರಿಹಾರ ನೀಡಲು ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಆಯೋಜಿಸುತ್ತಿರುವ ಈ ಸಭೆಗೆ ಕೆಪಿಸಿಸಿ ಪರವಾಗಿ ಎಲ್ಲರಿಗೂ ಸ್ವಾಗತ ಕೋರುತ್ತೇನೆ ಎಂದರು.
ಇದನ್ನೂ ಓದಿ-ಕೊಟ್ಟ ಮಾತಿನಂತೆ PTCL ಕಾಯ್ದೆ ತಿದ್ದುಪಡಿ ತರಲು ಮುಂದಾಗಿದ್ದೇವೆ: ಸಿದ್ದರಾಮಯ್ಯ
Our country is going through unprecedented crisis at the moment under the ruling regime and that's why the opposition parties have come together to fight this crisis to safeguard the future of our country people. Addressing the press conference during Opposition Meeting in… pic.twitter.com/0PuVD5QTRP
— DK Shivakumar (@DKShivakumar) July 17, 2023
ಈ ಒಗ್ಗಟ್ಟನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಕರ್ನಾಟಕ ರಾಜ್ಯದಲ್ಲಿ ಪಡೆದ ಫಲಿತಾಂಶವನ್ನೇ 2024ರ ಚುನಾವಣೆಯಲ್ಲಿ ಪಡೆಯಲು ಕೆಲಸ ಮಾಡಲಾಗುವುದು.ಇನ್ನು ಈ ಸಭೆಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ನಿಯೋಜಿತ ನಾಯಕರ ಹೊರತಾಗಿ ಬೇರೆ ಯಾವುದೇ ನಾಯಕರು ಸಭೆ ನಡೆಯುವ ಹೋಟೆಲ್ ಹಾಗೂ ಬೇರೆ ಪಕ್ಷಗಳ ನಾಯಕರ ಆಹ್ವಾನಕ್ಕೆ ವಿಮಾನ ನಿಲ್ದಾಣಗಳಲ್ಲಿ ಎಂದು ಪಕ್ಷದ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದು ಮನವಿ ಮಾಡಿದರು.
ಕೆಲವು ಸಚಿವರು ಹಾಗೂ ನಾಯಕರಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಅನುಮತಿ ಇಲ್ಲದವರು ಹೋಟೆಲ್ ಗೆ ಬರಬೇಡಿ ಎಂದು ಮನವಿ ಮಾಡುತ್ತೇನೆ ಎಂದು ಅವರು ಕೋರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.