ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್‌ ಆತ್ಮಹತ್ಯೆ ಪ್ರಕರಣ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರದ ಒಂದು ನಿದರ್ಶನ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಸರ್ಕಾರದ ಎಲ್ಲಾ ಸಚಿವರು 40% ಕಮಿಷನ್ ಪಡೆಯುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.


COMMERCIAL BREAK
SCROLL TO CONTINUE READING

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಮಾಧ್ಯಮಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಫ್‌ಐಆರ್‌ನಲ್ಲಿ ಸೆಕ್ಷನ್ 34 ಹಾಗೂ ಐಪಿಸಿ 306 ಅಡಿಯಲ್ಲಿ ಕೇಸ್ ದಾಖಲಾಗಿದೆ. ಆದರೆ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 13 ಹಾಗೂ ಐಪಿಸಿ 302 ಅಡಿಯಲ್ಲಿ ಕೇಸ್ ದಾಖಲಿಸಬೇಕು ಎಂದು ಆಗ್ರಹ ಮಾಡಿದರು.  


ಇದನ್ನೂ ಓದಿ : Santosh Patil Death : 'ಅಧಿವೇಶನದಲ್ಲಿ ಚರ್ಚೆ ಆಗಿದಿದ್ರೆ ಈ ಘಟನೆ ನಡಿಯುತ್ತಿರಲಿಲ್ಲ'


ಎಫ್‌ಐಆರ್‌ನಲ್ಲಿ 4 ಕೋಟಿ ರೂಪಾಯಿ ಕೆಲಸ ಮಾಡಿದ್ದೇವೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಹಾಗೂ ಅವರ ಪಿಎಗಳು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಉಲ್ಲೇಖವಿದೆ.ಇದಕ್ಕೆ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರನ್ನ ಭೇಟಿ ಮಾಡಿದ್ದೇವೆ ಎಂದು ತಿಳಿಸಿಲಾಗಿದೆ. ಭ್ರಷ್ಟಾಚಾರ ಪರಿಣಾಮ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು.ವಾಟ್ಸಪ್‌ನಲ್ಲಿ ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಕಳಿಸಿದ್ದಾರೆ.ಇದು ಡೆತ್‌ನೋಟ್. ಹೀಗಾಗಿ ಸಚಿವ ಈಶ್ವರಪ್ಪ ಅವರನ್ನ ಬಂಧಿಸಬೇಕು. ಬಂಧನ ನಂತರ ವಜಾ ಆಗತ್ತೆ ಎಂದು ವಿವರಿಸಿದರು.


ಮುಖ್ಯಮಂತ್ರಿ ನಿವಾಸಕ್ಕೆ ಕೈ ಮುತ್ತಿಗೆ!:


ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರೇಸ್ ಕೋರ್ಸ್‌ನಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಮನೆಗೆ ನಾಳೆ ಬೆಳಿಗ್ಗೆ 10:30ಕ್ಕೆ ಕಾಂಗ್ರೆಸ್ ಘೇರಾವ್ ಹಾಕಲಿದೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಗುರುವಾರ ಸಿಎಂ ಮನೆಗೆ ಘೇರಾವ್ ಹಾಕುತ್ತೇವೆ. ಶುಕ್ರವಾರದಿಂದ ವಿವಿಧ ತಂಡಗಳಾಗಿ ತೆರಳಿ ಐದು ದಿನಗಳ ಕಾಲ ಎಲ್ಲಾ ಜಿಲ್ಲೆಗಳಿಗೆ ಹೋಗಿ ಸರ್ಕಾರದ ವಿರುದ್ಧ ಹೋರಾಟ ಮಾಡಲಿದ್ದೇವೆ ಎಂದರು.


ಇದನ್ನೂ ಓದಿ : ಸಂತೋಷ್ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಅಗ್ರಹ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.