Araga Jnanendr : ಅಡಿಕೆ ಉತ್ಪನ್ನ ಆಮದು ವಿರೋಧ : ಕೇಂದ್ರಕ್ಕೆ ರಾಜ್ಯ ನಿಯೋಗ
ಅಡಿಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ರಾಜ್ಯ ನಿಯೋಗ ಬುಧವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ತೆರಳಿದೆ.
ಬೆಂಗಳೂರು : ಅಡಿಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ರಾಜ್ಯ ನಿಯೋಗ ಬುಧವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ತೆರಳಿದೆ.
ರಾಜ್ಯ ಅಡಿಕೆ ಬೆಳೆಗಾರರ ಸಂಘದ ನಿಯೋಗ ನವದೆಹಲಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಅರ್ಥಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು, ಇಂದು ಭೇಟಿಯಾಗಿ ಮನವಿ ಸಲ್ಲಿಸಿದರು.
ಇದನ್ನೂ ಓದಿ : ಕಿಮ್ಸ್ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ: ಮಹಿಳೆಯೊಬ್ಬರ ಕಣ್ಣಿನ ಕೆಳಗೆ ಸಿಲುಕಿದ್ದ ಟೂತ್ ಬ್ರಶ್ ಹೊರ ತೆಗೆದ ವೈದ್ಯರು
ಮಲೆನಾಡು ಪ್ರದೇಶದ ಆರ್ಥಿಕತೆಗೆ ಬೆನ್ನೆಲುಬಾಗಿರುವ ರಾಜ್ಯದ ಅಡಿಕೆ ಬೆಳೆಗಾರರು ಕಷ್ಟದಲ್ಲಿದ್ದಾರೆ. ಅಡಿಕೆ ಮಲೆನಾಡು ಭಾಗದ ರೈತರ ಬದುಕಿಗೆ ನೆರವಾಗಿದೆ. ಹಾಗಾಗಿ, ಅಡಿಕೆ ಬೆಳೆಗಾರರ ಹಿತ ರಕ್ಷಿಸುವಂತೆ ನಿಯೋಗ ಮನವಿ ಮಾಡಿದೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಬಿಜೆಪಿ ಶಾಸಕ ಹರತಾಳು ಹಾಲಪ್ಪ ಕ್ಯಾಂಪ್ಕೋ ಅಧ್ಯಕ್ಷ ಶ್ರಿ ಕಿಶೋರ್ ಕುಮಾರ್ ಕೊಡಗಿ, ವ್ಯವಸ್ಥಾಪಕ ನಿರ್ದೇಶಕ ಶ್ರಿ ಕೃಷ್ಣಕುಮಾರ್ ಸೇರಿದಂತೆ ಇನ್ನಿತರ ಗಣ್ಯರೂ ನಿಯೋಗದಲ್ಲಿದ್ದರು.
ನಿಯೋಗದ ಬೇಡಿಕೆಗಳೇನು?
ಅಡಿಕೆ ಬೆಳೆಯ ನಿಗದಿತ ಉತ್ಪಾದನಾ ವೆಚ್ಚ ಹೆಚ್ಚು ಮಾಡಬೇಕು, ಆಮದು ಮೇಲಿನ ಸುಂಕ ಜಾಸ್ತಿ ಮಾಡಬೇಕು. ಅಡಿಕೆಯ ಲಾಭ ಸ್ವದೇಶೀ ರೈತರಿಗೆ ಸಿಗಬೇಕು. ವಿದೇಶಿಗರಿಗೆ ಇಲ್ಲಿನ ಲಾಭ ಸಿಗುವಂತಾಗಿದೆ. ಇಲ್ಲಿ ಎಲ್ಲಾ ಸಚಿವರ ಭೇಟಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹಕಾರ ನೀಡುತ್ತಿದ್ದಾರೆ.ಅಡಿಕೆ ಮೇಲಿನ ಜಿಎಸ್‌ಟಿ ದರದ ಬಗ್ಗೆಯೂ ಕೇಂದ್ರ ಸಚಿವರ ಬಳಿ ಚರ್ಚಿಸಲಾಗಿದೆ, ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ : Belagavi : ಚಾಕುವಿನಿಂದ ಕತ್ತು ಕೋಯ್ದು ಪತ್ನಿ ಕೊಂದ ಪಾಪಿ ಪತಿ!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.