ಧಾರವಾಡ : ಜನವರಿ 12 ರಂದು ಧಾರವಾಡ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲ್ಲೂಕಿನಾದಾದ್ಯಂತ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ದಿನಾಂಕ 13-01-2022 ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವದನ್ನು ಹಿಂಪಡೆಯಲಾಗಿದೆ. ಜನೆವರಿ 24 ರ ಸೋಮವಾರದಿಂದ ಶಾಲೆಗಳನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : KL Rahul : ಸರಣಿ ಸೋಲಿನಿಂದ ಬೇಸತ್ತ ಕೆಎಲ್ ರಾಹುಲ್ : ದುಃಖದಿಂದ ಸೋಲಿಗೆ ಕಾರಣ ತಿಳಿಸಿದ ಕ್ಯಾಪ್ಟನ್


ಈ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ರನ್ವಯ ಜಿಲ್ಲೆಯ ಎಲ್ಲ ರೀತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವ್ಯಾಪ್ತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರನ್ನು  ನೋಡಲ್ ಅಧಿಕಾರಿಯನಾಗಿ ನೇಮಿಸಿ ಆದೇಶಿಸಿದ್ದು,  ಈ ಆದೇಶವು ತಕ್ಷಣದಿಂದ ಜಾರಿಗೆ ಬಂದಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. 


ಶಾಲಾ, ಕಾಲೇಜುಗಳ ಮುಖ್ಯಸ್ಥರು ಪಾಲಿಸಬೇಕಾದ ನಿಯಮಗಳು:


• ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಮತ್ತು ಪುನರ್ ಆರಂಭಿಸುವ ಕುರಿತು ನಿಯಮಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು.
• ರಜೆ ಘೋಷಿಸಿದ ಅವಧಿಯಲ್ಲಿ ಶಾಲಾ, ಕಾಲೇಜು ಆವರಣವನ್ನು ಶ್ಯಾನಿಟೈಜ್ ಮಾಡಬೇಕು.
• ಸೋಂಕಿತ ವಿದ್ಯಾರ್ಥಿಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ದಿನಂಪ್ರತಿ ವಿಚಾರಿಸುವುದು ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು.
• ವಿದ್ಯಾರ್ಥಿಗಳಿಗೆ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ತಿಳುವಳಿಕೆಯನ್ನು ನೀಡುವುದು.
• ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ವಿದ್ಯಾರ್ಥಿಗಳಿಗೆ ಲಸಿಕಾಕರಣ ಕುರಿತು ಕ್ರಮ ಕೈಕೊಳ್ಳುವುದು.
• ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಸೋಂಕಿತ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವ ತಪಾಸಣೆ ಕುರಿತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸೂಕ್ತ ಕ್ರಮ ವಹಿಸುವುದು.
• ರಜೆ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಕಂಡು ಬರುವ ಪಾಸಿಟಿವ್ ಪ್ರಕರಣಗಳ ಮಾಹಿತಿಯನ್ನು ಪಡೆದು ರಜೆಯನ್ನು ಮುಂದುವರೆಸುವ ಬಗ್ಗೆ ಅಥವಾ ಶಾಲೆಯನ್ನು ಪುನರ್ ಆರಂಭಿಸುವ ಬಗ್ಗೆ ನೋಡಲ್ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.


ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ನೋಡೆಲ್ ಅಧಿಕಾರಿಗಳಿಗೆ ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿದ್ದಾರೆ.


ಕೋವಿಡ್-19 ಸೋಂಕು ನಿಯಂತ್ರಣ ಕುರಿತು ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದವರು ಪರಸ್ಪರ ಸಹಕಾರ, ಸಮನ್ವಯತೆಯೊಂದಿಗೆ ಅವರಿಗೆ ವಹಿಸಿಕೊಟ್ಟ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದು.  ತಪ್ಪಿದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಸ್‍ನ್ 56ರನ್ನು ಆದೇಶದಲ್ಲಿ ಪುನರ್ ಉಚ್ಚರಿಸಿ, ಆದೇಶದಲ್ಲಿ ತಿಳಿಸಿದ್ದಾರೆ.


ಶಾಲೆ ಒಂದು ಘಟಕವಾಗಿ ಪರಿಗಣನೆ: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮೇಕ್ರಾನ್ ವೈರಾಣು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರವು ಜನೆವರಿ 11 ರಂದು ಮಾರ್ಗಸೂಚಿಗಳನ್ನು ಹೊರಡಿಸಿ ತಾಲೂಕನ್ನು ಒಂದು ಘಟಕವೆಂದು ಪರಿಗಣಿಸಿ ಶಾಲೆಗಳನ್ನು ಸ್ಥಗಿತಗೊಳ್ಳಿಸುವ ಅಥವಾ ನಡೆಸುವ ಬಗ್ಗೆ ತಿರ್ಮಾನಿಸಲು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದ್ದ ಆದೇಶವನ್ನು ಪರಿಷ್ಕರಿಸಿ, ಜನೆವರಿ 21 ರಂದು ಹೊಸ ಮಾರ್ಗಸೂಚಿಯನ್ನು ನೀಡಿದೆ.


ಅದರಂತೆ ಒಂದು ತಾಲೂಕನ್ನು ಘಟಕವೆಂದು ಪರಿಗಣಿಸಿರುವುದನ್ನು ಮಾರ್ಪಡಿಸಿ, ಪ್ರಾಥಮಿಕ ಮತ್ತು ಪ್ರೌಢ್ ಶಾಲೆಯನ್ನು ಘಟಕವೆಂದು ಪರಿಗಣಿಸಿ ಅಂತಹ ಶಾಲೆ, ಕಾಲೇಜುಗಳನ್ನು ಮಾತ್ರ ಮುಚ್ಚುವ ಅಥವಾ ನಡೆಸುವ ಬಗ್ಗೆ ನಿರ್ನಯ ತೆಗೆದುಕೊಳ್ಳುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸ್ಪಷ್ಟೀಕರಣ ಹೊರಡಿಸಿದ್ದಾರೆ.


ಕೋವಿಡ್ ಕಾರಣದಿಂದ ಮುಚ್ಚಿರುವ ಶಾಲೆಗಳು: ಈಗಾಗಲೇ ಕೋವಿಡ್ ಸೋಂಕಿತರ ಪ್ರಕರಣಗಳು ದಾಖಲಾಗಿರುವ ಶಾಲೆಗಳನ್ನು  ಅಲ್ಲಿನ ಕೋವಿಡ್ ಸಂಖ್ಯೆಗಳಿಗೆ ಅನುಗುಣವಾಗಿ 3, 5 ಮತ್ತು 7 ದಿನಗಳ ವರೆಗೆ ಮುಚ್ಚಲಾಗುತ್ತದೆ. ಸೀಲ್‍ಡೌನ್ ಅವಧಿ ಮುಗಿದ ನಂತರ, ಶ್ಯಾನಿಟೈಜ್ ಮಾಡಿ ಸ್ವಚ್ಚಗೊಳಿಸಿ ಶಾಲೆಗಳನ್ನು  ಮರು ಆರಂಭಿಸಬೇಕು.


ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.