ಧಾರವಾಡ : ಹುಬ್ಬಳ್ಳಿಯ ಪ್ರಾವಿಡೆಂಟ್ ಫಂಡ್ ಇಲಾಖೆಯವರು ತಮ್ಮ ನಿವೃತ್ತಿ ನಂತರದ ಪಿಂಚಣಿ ನಿಗದಿಪಡಿಸುವಾಗ ತಪ್ಪು ಲೆಕ್ಕ ಹಾಕಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು 8 ಜನ ನಿವೃತ್ತ ಪಿಂಚಣಿದಾರರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದರು.


COMMERCIAL BREAK
SCROLL TO CONTINUE READING

ಸದರಿ ದೂರುಗಳ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ತಮಗೆ ಸಂಬಂಧಿಸಿದ ಪಿಂಚಣಿ ವ್ಯಾಜ್ಯವನ್ನು ಪಿಎಫ್ ಇಲಾಖೆಯಿಂದ ಪ್ರತಿ ತಿಂಗಳು ನಡೆಸುವ ಪಿಂಚಣಿ ಲೋಕ್‍ ಅದಾಲತ್‍ನಲ್ಲಿ ದೂರುದಾರ ಭಾಗವಹಿಸಿ ಪರಿಹಾರ ಕಂಡುಕೊಳ್ಳದೇ ಅನಗತ್ಯವಾಗಿ ಗ್ರಾಹಕರ ಆಯೋಗಕ್ಕೆ ದೂರುಗಳನ್ನು ಸಲ್ಲಿಸಿದ್ದು ತಪ್ಪು ಅಂತಾ ಹೇಳಿ ಅವುಗಳನ್ನು ವಜಾಗೊಳಿಸಬೇಕು ಎಂದು ಪಿಎಫ್ ಇಲಾಖೆಯವರು ಆಕ್ಷೇಪಿಸಿದ್ದರು.


ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!


ಎಲ್ಲ ದೂರುದಾರರ ಪಿಂಚಣಿ ನಿಗದಿಪಡಿಸುವಾಗ ಪಿಎಫ್ ಇಲಾಖೆ ಸರಿಯಾಗಿ ಲೆಕ್ಕ ಹಾಕದೇ ತಪ್ಪೆಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಅವರು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಆಯೋಗ ಅಭಿಪ್ರಾಯಪಟ್ಟು ಪಿ.ಎಫ್. ಇಲಾಖೆಯವರ ವಾದವನ್ನು ತಳ್ಳಿಹಾಕಿದೆ. ದೂರುದಾರರಿಗೆ ಅವರ ಪಿಂಚಣಿ ನಿಗದಿಪಡಿಸಿದ ದಿನಾಂಕದಿಂದ ಆಯೋಗ ಆದೇಶ ಹೊರಡಿಸಿದ ದಿನಾಂಕದವರೆಗೆ 8 ಜನದೂರುದಾರರಿಗೆ ಒಟ್ಟುರೂ.5 ಲಕ್ಷ 63 ಸಾವಿರ 541 ಗಳ ಬಾಕಿ ಹಣ ಮತ್ತು ಅದರ ಮೇಲೆ ಶೇ.10 ರಂತೆ ಬಡ್ಡಿ ಲೆಕ್ಕ ಹಾಕಿ ನೀಡುವಂತೆ ಆದೇಶಿಸಿದೆ. ಜೊತೆಗೆ ಪ್ರತಿಯೊಬ್ಬ ದೂರುದಾರರಿಗೆ ಮಾನಸಿಕ ತೊಂದರೆಗಾಗಿ ತಲಾ ರೂ.20 ಸಾವಿರ ಪರಿಹಾರ ಹಾಗೂ ತಲಾ ರೂ.10 ಸಾವಿರ ಅವರವರ ಪ್ರಕರಣದ ಖರ್ಚು ವೆಚ್ಚ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ನೀಡಲು ಆಯೋಗ ಆದೇಶಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.