ಬೆಂಗಳೂರು: ಇನ್ ಸೈಟ್ ಐಎಎಸ್ ಅಕಾಡೆಮಿ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಮುಖ್ಯಮಂತ್ರಿ Siddaramaiah ಅವರು ಅಭಿನಂದಿಸಿ ಮಾತನಾಡಿದರು.ಕಾರ್ಯಕ್ರಮದಲ್ಲಿ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್,  ಇನ್ ಸೈಟ್ ಸಂಸ್ಥೆಯ ನಿರ್ದೇಶಕರಾದ ವಿನಯ್ ಕುಮಾರ್ ಹಾಗೂ ಮಧುಕರ್ ನಾಗಣ್ಣ ಅವರು ಉಪಸ್ಥಿತರಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಇಲಾಖೆಗಳ ನಡುವಿನ ಸಮನ್ವಯ ಕೊರತೆ: ಒತ್ತುವರಿ ಕಾರ್ಯಾಚರಣೆ ಸ್ಥಗಿತ, ಪಾಲಿಕೆಗೆ ಹಿನ್ನೆಡೆ


ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ.ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಆ ಸ್ಥಾನದಲ್ಲಿ, ಆ ಹುದ್ದೆಯಲ್ಲಿರಲು ಅನರ್ಹರು.ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ.ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ ಎಂದು ಹೇಳಿದರು.


ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುಗೆ ಒತ್ತುವರಿ ತೆರವು ಕಾರ್ಯಾಚರಣೆ


ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ?ಈ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು.ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು ಎಂದು ಹೇಳಿದರು.


ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್ ಗಳಾಗಿ ಮಾಡಬೇಕು ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.