ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆ ನೆಲೆಗೊಳಿಸುವುದೇ ನಮ್ಮ ಮೊದಲ ಆದ್ಯತೆ: ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ಹಳೆ ದ್ವೇಷದ ಹಿನ್ನೆಲೆ ಮಂಗಳವಾರ(ಜುಲೈ 11) ಒಂದೇ ದಿನ ಐವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಮಾತನಾಡಿರುವ ಅವರು, ‘ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ.ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂಡಿ ಹಾಗೂ ಸಿಇಒ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಭರದಿಂದ ಸಿದ್ಧತೆ
ಈ ಕೊಲೆ ಪ್ರಕರಣಗಳನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ. ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂತಹ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಳೆ ದ್ವೇಷದ ಹಿನ್ನೆಲೆ ಮಂಗಳವಾರ(ಜುಲೈ 11) ಒಂದೇ ದಿನ ಐವರನ್ನು ಹತ್ಯೆ ಮಾಡಲಾಗಿತ್ತು. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆಯೇ ಎಂಬ ಪ್ರಶ್ನೆ ಮೂಡಿದೆ.
ಇದನ್ನೂ ಓದಿ: ನಾಯಿಯನ್ನು ಕಾಡಲು ಹೊರಟ ಬಾಲಕನ ಫನ್ನಿ ವಿಡಿಯೋ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.