ಬೆಂಗಳೂರು: ನಾನು ಮೈಸೂರಿಗೆ ಬಂದಾಗಿನಿಂದಲೂ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಲೇ ಇದ್ದೇನೆ. ಸಭೆಗಳಲ್ಲಿ ಚರ್ಚಿಸುತ್ತೇನೆ. ನಮ್ಮ ಸರ್ಕಾರ ಹಾಗೂ ಇಲಾಖೆ ರೈತರ ಅಭ್ಯುದಯಕ್ಕೆ ಬದ್ಧ ಎಂದು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ (ST Somashekhar) ಹೇಳಿದರು.


COMMERCIAL BREAK
SCROLL TO CONTINUE READING

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಆಗಿರುವಂತಹ ಸಿದ್ದರಾಮಯ್ಯ (Siddaramaiah) ಅವರು ಹೊರಗೆ ಆರೋಪ ಮಾಡುವುದಲ್ಲ. ಅಧಿವೇಶನದಲ್ಲಿ ಬಂದು ಮಾತನಾಡಲಿ. ನಾವುಗಳೂ ಸಹ ಉತ್ತರ ಕೊಡುವಲ್ಲಿ ಸನರ್ಥರಾಗಿದ್ದೇವೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


ಕಲ್ಯಾಣ ಕರ್ನಾಟಕ ಭಾಗದ ಜನ‌ ಹಿಂದುಳಿದವರೆಂಬ ಕೀಳರಿಮೆಯಿಂದ ಹೊರಬರಲಿ: ಬಿ.ಸಿ.ಪಾಟೀಲ್


ರಾಜ್ಯ ಸರ್ಕಾರ ಹಾಗೂ ಸಹಕಾರ ಇಲಾಖೆಯ ಪ್ರಮುಖ ಯೋಜನೆಗಳಲ್ಲೊಂದಾದ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಅಕ್ಟೋಬರ್ 2ರಂದು ಮೈಸೂರಿನಲ್ಲಿ ಏರ್ಪಡಿಸಲಾಗುತ್ತಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು. 


ಬಿಜೆಪಿಯ ಮಾಧ್ಯಮ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾದ ಕೊರೋನಾ ವಿರುದ್ಧದ ಜನಜಾಗೃತಿ ಮೂಡಿಸಿದ ಮಾಧ್ಯಮ ಸೇನಾನಿಗಳಾದ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್ ಗಳಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.


ಮೋದಿ ಸರ್ಕಾರ ರೈತರಿಗಾಗಿ 3 ಮಸೂದೆ ತಂದಿದ್ದು ಅದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ: ಜೆ.ಪಿ.ನಡ್ಡಾ


ಸಹಕಾರ ಇಲಾಖೆಯಿಂದ ಕೋವಿಡ್ ಸಂಕಷ್ಟಗಳಿಗೆ ತುತ್ತಾದ ರೈತರು (Farmers), ಸಣ್ಣ, ಮಧ್ಯಮ ಉದ್ದಿಮೆದಾರರು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಪೂರಕವಾಗುವಂತೆ ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಮಂಗಳವಾರ ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿಗಳು ಚಾಲನೆ ಕೊಟ್ಟಿದ್ದಾರೆ. ಆರ್ಥಿಕ ಸ್ಪಂದನ ಕಾರ್ಯಕ್ರಮವನ್ನು ನಾಲ್ಕು ವಿಭಾಗಗಳಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ನಂತರ ಇದೀಗ ಮೈಸೂರಿನಲ್ಲಿ ಅ. 2 ರಂದು  ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. 


ಹೈನುಗಾರರು ಹಾಗೂ ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ 2 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತಿದೆ. ಈಗಾಗಲೇ ರೈತರಿಗೆ  15300 ಕೋಟಿ ರೂಪಾಯಿ ಬೆಳೆ ಸಾಲ ನೀಡಲು ಪ್ರಾರಂಭಿಸಲಾಗಿದ್ದು, 12.46 ಲಕ್ಷ ರೈತರಿಗೆ 8079 ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಇದರಲ್ಲಿ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲಗಳೂ ಸೇರಿವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.


ಬಿಜೆಪಿ ವತಿಯಿಂದ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸತತ ನಾಲ್ಕು ತಿಂಗಳ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳು ಮಾಡಿದ್ದಾರೆ. ಅವರನ್ನು ಸ್ಮರಿಸುವ ಕಾರ್ಯ ನಮ್ಮ ಹೆಮ್ಮೆ ಎಂದು ಸಚಿವರಾದ ಎಸ್.ಟಿ. ಸೋಮಶೇಖರ್ ತಿಳಿಸಿದರು.


ದಕ್ಷಿಣ ಭಾರತದ ಮೊದಲ ಕಿಸಾನ್ ರೈಲು, ಆಂಧ್ರ ಪ್ರದೇಶದಿಂದ ನೇರವಾಗಿ ದೆಹಲಿ ತಲುಪಲಿರುವ ಹಣ್ಣು-ತರಕಾರಿಗಳು

ಶಾಸಕರಾದ ಎಸ್.ಎ. ರಾಮದಾಸ್ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಸುದ್ದಿ ಮಾಡಲು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಮಾಧ್ಯಮದವರು ಕೆಲಸ ಮಾಡಿದ್ದಾರೆ. 


ಫೋಟೋಗಳ ಮೂಲಕ ಚಿತ್ರಣವನ್ನು ಜೀವಂತವಾಗಿಡುವ ಕಾರ್ಯವನ್ನು ಫೋಟೋಗ್ರಾಫರ್ ಗಳು ಮಾಡುತ್ತಿದ್ದಾರೆ. ಲೈವ್ ಕಾರ್ಯಕ್ರಮ ಸೇರಿದಂತೆ ಕೆಲವು ಸಂದರ್ಭಗಳನ್ನು ಕಟ್ಟಿಕೊಡುವ ಕೆಲಸವನ್ನು ವಿಡಿಯೋಗ್ರಾಫರ್ ಗಳು ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು. 


ಬಿಜೆಪಿ ನಗರಾಧ್ಯಕ್ಷರಾದ ಶ್ರೀವತ್ಸ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಪಕ್ಷದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೀಗ ಪಕ್ಷದ ಮಾಧ್ಯಮ ವಿಭಾಗದಿಂದ ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸಿದ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್ ಗಳಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷರಾದ ಮಹೇಂದ್ರ ಮಾತನಾಡಿ, ಪತ್ರಕರ್ತರ ಕಾರ್ಯವನ್ನು ಗುರುತಿಸುವ ಕೆಲಸವನ್ನು ಬಿಜೆಪಿ ಮಾಡಿರುವುದು ಸಂತಸದ ವಿಷಯ. ಇನ್ನು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ದಾಖಲಾದಾಗ ಅದರ ವೆಚ್ಚವನ್ನು ಸರ್ಕಾರ ಭರಿಸುವಂತಾಗಲಿ ಎಂದು ಮನವಿ ಮಾಡಿದರು. 


ಶಾಸಕರಾದ ನಾಗೇಂದ್ರ, ಮುಡಾ ಅಧ್ಯಕ್ಷರಾದ ಎಚ್.ವಿ. ರಾಜೀವ್, ಗ್ರಾಮೀಣ ಬಿಜೆಪಿ ಅಧ್ಯಕ್ಷರಾದ ನಾಗರತ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.