ಬೆಂಗಳೂರು, ಜೂನ್ 20: "ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.


COMMERCIAL BREAK
SCROLL TO CONTINUE READING

ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಸ್ಥಾಪನೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು.


“ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು ಹೇಳಿದರು.


ಇದನ್ನೂ ಓದಿ: ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು


“ನಾವು ಯಾರು ಶಾಶ್ವತವಲ್ಲ ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ. ಉತ್ತಮವಾದ ಆಲೋಚನೆ ಮಾಡಿರುವ ಕನ್ನಡ ಸಂಸ್ಕೃತಿ ಇಲಾಖೆಗೆ ಅಭಿನಂದನೆಗಳು. ಕನ್ನಡ ಬೆಳೆಯಲಿ, ಉಳಿಯಲಿ” ಎಂದು ಆಶಿಸಿದರು.


ದೇಶದ ಮಕ್ಕಳ ಭವಿಷ್ಯ ಮುಖ್ಯ


ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ನೀಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು “ನೀಟ್ ಪರೀಕ್ಷೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರೇ ಅಕ್ರಮ ನಡೆದಿದೆ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ ಎನ್ ಟಿಎ (ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ) ಗೆ ನೋಟಿಸ್ ನೀಡಿರುವುದು ಉತ್ತಮ ನಡೆ. ನಮ್ಮ ದೇಶದ ಮಕ್ಕಳ ಭವಿಷ್ಯ ಮುಖ್ಯವಾದುದು” ಎಂದು ಹೇಳಿದರು.


ಇದನ್ನೂ ಓದಿ: ಎರಡು ದಿನಗಳ ದಕ್ಷಿಣ ಭಾರತ ಉತ್ಸವಕ್ಕೆ ಅರಮನೆ ಮೈದಾನ ಸಜ್ಜು : ಪ್ರವಾಸೋದ್ಯಮ ಇಲಾಖೆ ಮತ್ತು ಎಫ್.ಕೆ.ಸಿ.ಸಿಐ ನಿಂದ ಆಯೋಜನೆ


ಚನ್ನಪಟ್ಟಣದಿಂದ ಉಪಚುನಾವಣೆಗೆ ಸ್ಪರ್ಧಿಸುವಿರಾ ಎಂದು ಕೇಳಿದಾಗ “ಅದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 16 ಸಾವಿರ ಮತಗಳು ಬಂದಿದ್ದವು. ಲೋಕಸಭೆಯಲ್ಲಿ 80 ಸಾವಿರ ಮತಗಳು ಬಂದಿವೆ. ರಾಮನಗರ ಜಿಲ್ಲೆಯ 4 ಸ್ಥಾನಗಳಲ್ಲಿ ಮೂವರು ಕಾಂಗ್ರೆಸ್ ಶಾಸಕರಿದ್ದು ಒಂದನ್ನು ಬದಲಾಯಿಸಬೇಕಾಗಿದೆ” ಎಂದು ಮಾರ್ಮಿಕವಾಗಿ ನುಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.