`ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ,`
CM Siddaramaiah: ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಬೆಂಗಳೂರು: ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ.
ಇದನ್ನೂ ಓದಿ: H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!
ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.
ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ.ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಯ್ಯ ಎಚ್ಚರಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ