`ಬಾಕಿ ಸಾಲ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಮನ್ನಾಮಾಡ್ತಿನಿ`
ನಮ್ಮ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡ್ತಿನಿ. ಬಿಜೆಪಿಯೊಂದಿಗಿನ 20 ತಿಂಗಳು, ಕಾಂಗ್ರೆಸ್ ನೊಂದಿಗಿನ 14 ತಿಂಗಳ ಸಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೆನೆ. ಪುರ್ಣ ಬಹುಮತದ ಸರ್ಕಾರ ಬಂದ್ರೆ ರೈತರ ಸಾಲ ಮನ್ನಾ ಮಾಡುವುದಾಗಿ ಕುಮಾರ್ ಸ್ವಾಮಿ ಹೇಳಿದರು.
ಬಸವಕಲ್ಯಾಣ: ನಮ್ಮ ಪಕ್ಷ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನಾನು ಈ ಹಿಂದೆ ಸಾಲಮನ್ನಾ ಮಾಡಿದಾಗ ತಾಂತ್ರಿಕ ಸಮಸ್ಯೆಯಿಂದ ಬಾಕಿ ಇರುವ ರೈತರ ಸಾಲವನ್ನು ನಾನು ಮನ್ನಾ ಮಾಡ್ತಿನಿ. ಬಿಜೆಪಿಯೊಂದಿಗಿನ 20 ತಿಂಗಳು, ಕಾಂಗ್ರೆಸ್ ನೊಂದಿಗಿನ 14 ತಿಂಗಳ ಸಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡಿದ್ದೆನೆ. ಪುರ್ಣ ಬಹುಮತದ ಸರ್ಕಾರ ಬಂದ್ರೆ ರೈತರ ಸಾಲ ಮನ್ನಾ ಮಾಡುವುದಾಗಿ ಕುಮಾರ್ ಸ್ವಾಮಿ ಹೇಳಿದರು.
ಇದನ್ನೂ ಓದಿ: "ಸುಳ್ಳು ಹೇಳದೇ ಬಿಜೆಪಿಯವರು ಬದುಕಲು ಸಾಧ್ಯವಿಲ್ಲ"
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಮೋರ್ಖಂಡಿ ಗ್ರಾಮದಲ್ಲಿ ಪಂಚರತ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಕ್ತಿ ಸಂಘಗಳ ಸಾಲವನ್ನು 24 ಗಂಟೆಯೊಳಗೆ ಮನ್ನಾ ಮಾಡ್ತಿನಿ. ರೈತರ, ಬಡವರ, ಶ್ರಮಿಕರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತೇನೆ.ಬಡವರ ಸಮಸ್ಯೆಗಳ ಪರಿಹಾರಕ್ಕಾಗಿ ನಮ್ಮ ಸರ್ಕಾರವನ್ನು ನಿವೆಲ್ಲರೂ ಸೇರಿ ತನ್ನಿ. ನಿಮ್ಮೆಲ್ಲರ ಸಮಸ್ಯೆಗಳನ್ನು ನಾನು ಪರಿಹರಿಸುತ್ತೇನೆ. ನಿಮ್ಮ ಮನೆ ಬಾಗಿಲಿಗೆ ನಾವು ಸೇವೆ ಒದಗಿಸುತ್ತೇವೆ. ಭೂಮಿ ಇಲ್ಲದ ಕಾರ್ಮಿಕರಿಗೆ ಕೂಡ ಅನೇಕ ತರಬೇತಿಗಳನ್ನು ನೀಡಿ ಅವರಿಗೆ ಸ್ವಯಂ ಉದ್ಯೋಗ ಒದಗಿಸಿಕೊಡುವ ಕೆಲಸ ಮಾಡುತ್ತೇನೆ. ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಸೈಯದ್ ಯಶ್ರಬ್ ಅಲಿ ಖಾದ್ರಿಯನ್ನು ಗೆಲ್ಲಿಸುವ ಮೂಲಕ ನಮ್ಮ ಕೈ ಬಲಪಡಿಸಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿರವರು ಮನವಿ ಮಾಡಿದರು.
ಇದನ್ನೂ ಓದಿ : Ind Vs SL : ಇಶಾನ್ ಕಿಶನ್ ಮೇಲೆ ಮುನಿಸಿಕೊಂಡ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ!
ಈ ಸಂದರ್ಭದಲ್ಲಿ ಜೆಡಿಎಸ್ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.