"ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ"-ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು.ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Manjunath N | Last Updated : Mar 15, 2024, 11:04 PM IST
  • ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ.ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ.
  • ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು.
  • ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್,ವಿಜಯೇಂದ್ರ ಯಡಿಯೂರಪ್ಪ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು.
"ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ"-ಸಿಎಂ ಸಿದ್ದರಾಮಯ್ಯ title=

ಬೆಂಗಳೂರು: ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು.ಬೆಲೆ ಏರಿಕೆಯ ಬೆಂಕಿಯಲ್ಲಿ ಬಿದ್ದವರ ನೆರವಿಗಾಗಿ ಗ್ಯಾರಂಟಿ ಯೋಜನೆ ಘೋಷಿಸಿದ್ದೂ ಆಯ್ತು, ಜಾರಿ ಮಾಡಿದ್ದೂ ಆಯ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಮೈಸೂರಿನಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ.ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ.ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್,ವಿಜಯೇಂದ್ರ ಯಡಿಯೂರಪ್ಪ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದರು.

ಇದನ್ನು ಓದಿ : Aishwarya Lekshmi : ಕ್ರಾಪ್ ಟಾಪ್ ಅಲ್ಲಿ 'ಕಿಂಗ್ ಆಫ್ ಕೋತಾ' ನಟಿ : ಫೋಟೋಸ್ ಇಲ್ಲಿವೆ

ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು. ಹೀಗೆ ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ಹೇಳಿದರು.

 ಇದನ್ನು ಓದಿ : ಭಾರತದಲ್ಲಿ 23 ತಳಿಗಳ ನಾಯಿ ಮಾರಾಟ, ಸಾಕಾಣಿಕೆ ನಿಷೇಧ : ಕೇಂದ್ರದಿಂದ ರಾಜ್ಯಗಳಿಗೆ ಸೂಚನೆ

ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ  ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಆಸ್ಪತ್ರೆ, ಕಾಲೇಜು, ಮಾರುಕಟ್ಟೆ, ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ.ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ. ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ? ಎಂದು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

 

Trending News