ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ಕರ್ನಾಟಕದ ನಿಲುವು ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.
ಇದನ್ನೂ ಓದಿ- Drug Case : ಬೆಂಗಳೂರಿನಲ್ಲಿ NCB ಅಧಿಕಾರಿಗಳ ದಾಳಿ, ಮೂವರು ಯುವತಿಯರು ವಶಕ್ಕೆ
ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ರೌಡಿಗಳಿಗೆ ಅವಕಾಶವಿಲ್ಲ:
ಇದೇ ಸಂದರ್ಭದಲ್ಲಿ ಬಿಜೆಪಿಯಲ್ಲಿ ರೌಡಿಶೀಟರ್ ಗಳಿಗೆ ಮಣೆಹಾಕಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಮಿತ್ರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಭಾರತೀಯ ಜನತಾ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ರೌಡಿಗಳಿಗೆ ಅವಕಾಶವಿಲ್ಲ. ಬಿಜೆಪಿ ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಪಕ್ಷದಲ್ಲಿ ಅವರಿಗೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆ ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ- "ನಾವು ನೀವೆಲ್ಲ ಶಿಕ್ಷಿತರಾಗಬೇಕಾದರೆ, ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಕಾರಣ"
ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು: ಚರ್ಚೆಯಾಗಿಲ್ಲ
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ ಬಗ್ಗೆ ಸರ್ಕಾರದಲ್ಲಿ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.