ಚಾಮರಾಜನಗರ: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಹೋರಾಟಗಾರರು ತಮಟೆ ಚಳವಳಿ ನಡೆಸಿ ಆಕ್ರೋಶ ಹೊರಹಾಕಿದರು.


COMMERCIAL BREAK
SCROLL TO CONTINUE READING

ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣದ ಮುಂದೆ ಜಮಾಯಿಸಿದ ಕನ್ನಡಪರ ಹೋರಾಟಗಾರರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.


ಸರ್ಕಾರ ಬಂದಾಗಿನಿಂದ ಎಲ್ಲಾ ರೀತಿ ಬೆಲೆ ಏರಿಕೆ ಆಗುತ್ತಿದೆ, ಈಗ ಮಹಿಳೆಯರಿಗೆ ಉಚಿತ ಪ್ರಯಾಣ ಕೊಟ್ಟು ಪುರುಷರಿಗೆ ಬೆಲೆ ಏರಿಕೆ ಬರೆ ಎಳೆದಿದ್ದಾರೆ, 
ಕೂಡಲೇ ಬಸ್ ದರ ಇಳಿಕೆ ಮಾಡಬೇಕು ಇಲ್ಲದಿದ್ದರೇ ನಿರಂತರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ಕೊಟ್ಟರು.



ಭಿತ್ತಿಪತ್ರ ಪ್ರದರ್ಶಿಸಿ ಎಸ್ಡಿಪಿಐ ಪ್ರತಿಭಟನೆ: 


ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಎಸ್ಡಿಪಿಐ ಮುಖಂಡರು, ಕಾರ್ಯಕರ್ತರು ಚಾಮರಾಜನಗರದ ಬಸ್ ನಿಲ್ದಾಣದಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟಿಸಿದರು.


ನಿಲ್ದಾಣದಲ್ಲಿ ಬಸ್ ಗಳನ್ನು ತಡೆದು ಭಿತ್ತಿಪತ್ರ ಹಿಡಿದು ಸರ್ಕಾರ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.


ಈಗಾಗಲೇ ಬೆಲೆ ಏರಿಕೆಗಳಿಂದ ಸಾಮಾನ್ಯರ ನಿತ್ಯಜೀವನಕ್ಕೆ ತೊಂದರೆ ಉಂಟಾಗಿದೆ. ಈಗ, ಬಸ್ ಪ್ರಯಾಣ ದರ ಏರಿಕೆ ಮಾಡಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಂತೆ ಸರ್ಕಾರ ನಡೆದುಕೊಂಡಿದೆ ಎಂದು ಕಿಡಿಕಾರಿದರು, ಸಾರ್ವಜನಿಕರಿಗೆ ಕರಪತ್ರ ಹಂಚಿ ಬಸ್ ಪ್ರಯಾಣ ದರ ಏರಿಕೆ ಖಂಡಿಸಿದರು.


ನಗರಸಭಾ ಸದಸ್ಯರಾದ ಗಾಳಿಪುರ ಮಹೇಶ್, ಮಹಮ್ಮದ್ ಆರೀಫ್, ಕಲೀಉಲ್ಲಾ ಇತರರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್