ಅಗತ್ಯ ವಸ್ತುಗಳ ದರ ಏರಿಕೆಗೆ ಆಕ್ರೋಶ: ಗ್ಯಾರಂಟಿ ಯೋಜನೆಗಳಿಂದಾಗಿಯೇ ಬೆಲೆ ಏರಿಕೆ ಎನ್ನುವ ವಿರೋಧ ಪಕ್ಷದವರಿಗೆ ಸಚಿವರ ತಿರುಗೇಟು..!

Price Hike: ಇಂದಿನಿಂದಲೇ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ದೈನಂದಿನ ಅಗತ್ಯ ವಸ್ತುಗಳಿಗಾಗಿ ಹೆಚ್ಚಿನ ಬೆಲೆ ತೆರಬೇಕಾಗಿದೆ. ಹೀಗಾಗಿ, ಒಂದೆಡೆ ರಾಜ್ಯದ ಜನತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಯ ಪರಿಣಾಮ ಜನರಿಗೆ "ಬೆಲೆ ಏರಿಕೆ ಬರೆ" ಎಳೆಯಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

Written by - Yashaswini V | Last Updated : Apr 1, 2025, 02:31 PM IST
  • ಇಂದಿನಿಂದ ರಾಜ್ಯದ ಜನತೆಗೆ ದರ ಏರಿಕೆ ಬಿಸಿ ತಟ್ಟಲಿದ್ದು, ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.
  • ಇದರ ಜೊತೆಗೆ ಬಿಬಿಎಂಪಿ ಕಸ ಸಂಗ್ರಹಕ್ಕೂ ತೆರಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ಇಂದಿನಿಂದಲೇ ಕಸಕ್ಕೂ ಸೆಸ್ ಕಟ್ಟಬೇಕಾಗಿದೆ.
  • ಅಂತೆಯೇ ಈಗಾಗಲೇ ಬಸ್ ಹಾಗೂ ಮೆಟ್ರೋ ದರ ದುಬಾರಿಯಾಗಿರುವ ಬೆನ್ನಲ್ಲೇ ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
ಅಗತ್ಯ ವಸ್ತುಗಳ ದರ ಏರಿಕೆಗೆ ಆಕ್ರೋಶ: ಗ್ಯಾರಂಟಿ ಯೋಜನೆಗಳಿಂದಾಗಿಯೇ ಬೆಲೆ ಏರಿಕೆ ಎನ್ನುವ ವಿರೋಧ ಪಕ್ಷದವರಿಗೆ ಸಚಿವರ ತಿರುಗೇಟು..!

Price Hike: ಏಪ್ರಿಲ್ 1 ಅಂದರೆ ಇಂದಿನಿಂದ ಸಾಕಷ್ಟು ದಿನಬಳಕೆ ವಸ್ತುಗಳ ಬೆಲೆ ಏರಿಕೆಯಾದಿದ್ದು  ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಹೌದು.. ಇಂದಿನಿಂದ ರಾಜ್ಯದ ಜನತೆಗೆ ದರ ಏರಿಕೆ ಬಿಸಿ ತಟ್ಟಲಿದ್ದು, ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ. ಇದರ ಜೊತೆಗೆ ಬಿಬಿಎಂಪಿ ಕಸ ಸಂಗ್ರಹಕ್ಕೂ ತೆರಿಗೆ ಸಂಗ್ರಹಿಸಲು ನಿರ್ಧರಿಸಿದ್ದು, ಇಂದಿನಿಂದಲೇ ಕಸಕ್ಕೂ ಸೆಸ್ ಕಟ್ಟಬೇಕಾಗಿದೆ. ಅಂತೆಯೇ ಈಗಾಗಲೇ ಬಸ್ ಹಾಗೂ ಮೆಟ್ರೋ ದರ ದುಬಾರಿಯಾಗಿರುವ ಬೆನ್ನಲ್ಲೇ ಗ್ರಾಹಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ. ಇಂದಿನಿಂದಲೇ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದ್ದು ಗ್ರಾಹಕರು ದೈನಂದಿನ ಅಗತ್ಯ ವಸ್ತುಗಳಿಗಾಗಿ ಹೆಚ್ಚಿನ ಬೆಲೆ ತೆರಬೇಕಾಗಿದೆ. ಹೀಗಾಗಿ, ಒಂದೆಡೆ ರಾಜ್ಯದ ಜನತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷದ ನಾಯಕರು ಗ್ಯಾರಂಟಿ ಯೋಜನೆಯ ಪರಿಣಾಮ ಜನರಿಗೆ "ಬೆಲೆ ಏರಿಕೆ ಬರೆ" ಎಳೆಯಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ. ಏತನ್ಮಧ್ಯೆ, ಗ್ಯಾರಂಟಿ ಯೋಜನೆಗಳಿಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ದರ ಏರಿಕೆಯನ್ನು ಸಚಿವ ಕೆ.ವೆಂಕಟೇಶ್ ಸಮರ್ಥನೆ ಮಾಡಿಕೊಂದಿದ್ದಾರೆ. 

Add Zee News as a Preferred Source

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಕೆ. ವೆಂಕಟೇಶ್, ಬೆಲೆ ಏರಿಕೆಗೂ ಗ್ಯಾರಂಟಿಗೂ ಯಾವುದೇ ಸಂಬಂಧ ಇಲ್ಲ; 25 ವರ್ಷದ ಹಿಂದೆ ಇದ್ದ ಬೆಲೆಯನ್ನೇ ಈಗಲು ಮುಂದುವರಿಸಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ- ತಿಂಗಳ ಮೊದಲ ದಿನವೇ ಭರ್ಜರಿ ಏರಿಕೆಯಾದ 'ಚಿನ್ನ' ಇಂದಿನ ದರ ಎಷ್ಟಿದೆ..?

ಹಾಲಿನ ದರವನ್ನು ಪ್ರತಿ ಲೀಟರ್ ಗೆ 4 ರೂ. ಹೆಚ್ಚಿಸಲಾಗಿದೆ. ಹೀಗೆ ಏರಿಕೆಯಾದ ಹಣವನ್ನು ಸಂಪೂರ್ಣವಾಗಿ ರೈತರಿಗೆ ಕೊಡುತ್ತೇವೆ. ಏರಿಕೆ ಮಾಡಿರುವ ಹಣವನ್ನು ಕೂಡಲೇ ಜಾರಿಯಾಗುವಂತೆ ರೈತರಿಗೆ ನೀಡಲು ಎಲ್ಲಾ ಹಾಲು ಒಕ್ಕೂಟಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಹಾಲು ಮೊಸರು, ಕರೆಂಟು ಎಲ್ಲ ಜಾಸ್ತಿ ಆಯ್ತು ಅಂತ  ಬೊಂಬಡಾ ಹೊಡಿತಿದ್ದಾರೆ, ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಪೆಟ್ರೋಲ್ ಬೆಲೆ 60 ರೂ. ಇತ್ತು- ಈಗ 103 ರೂಪಾಯಿ ಆಗಿದ್ರು ಯಾರು ಸಹ  ಮಾತನಾಡ್ತಾನೆ ಇಲ್ಲ. ಇದು ಜನರಿಗೆ ಹೊರೆ ಅಲ್ವಾ, ಯಾಕೆ ಯಾರೂ ಕೇಳ್ತಾ ಇಲ್ಲ ಎಂದು ಬಿಜೆಪಿಗೆ ಸಚಿವ ವೆಂಕಟೇಶ್ ತಿರುಗೇಟು ಕೊಟ್ಟರು.

ಇದನ್ನೂ ಓದಿ- ಕರ್ನಾಟಕದಲ್ಲಿ ಇಂದಿನಿಂದ ಹಾಲು, ಮೊಸರು, ವಿದ್ಯುತ್, ಟೋಲ್ ಸೇರಿದಂತೆ ಯಾವೆಲ್ಲ ವಸ್ತುಗಳ ಬೆಲೆ ಎಷ್ಟೆಷ್ಟು ಏರಿಕೆ?

ಸಚಿವ ರಾಜಣ್ಣ ಹಾಗೂ ಪುತ್ರನ ಹನಿ ಟ್ರ್ಯಾಪ್ ವಿಚಾರಕ್ಕೆ ಮಾತನಾಡಿ, ಈ ಕುರಿತು ಮಾತನಾಡಲ್ಲ. ತನಿಖೆ ಕುರಿತು ನನಿಗೇನು ಗೊತ್ತಿಲ್ಲ ಅವ್ರು ಕಂಪ್ಲೆಂಟ್ ಕೊಟ್ಟಿದ್ದಾರೆ. ತನಿಖೆ ನಡೆಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅವರು ಏನು ಕಂಪ್ಲೆಂಟ್ ಕೊಟ್ಟಿದ್ದಾರೊ ಅದರ ಪ್ರಕಾರ ತನಿಖೆಯಾಗುತ್ತೆ, ಹನಿಟ್ರ್ಯಾಪ್ ಮಾಡಿದ್ದಾರೆಂದು ರಾಜಣ್ಣ ಹೇಳಿದ್ದಾರೆ ತನಿಖೆ ಮಾಡೋಣ ಸತ್ಯಾಸತ್ಯತೆ ಆಚೆ ಬರ್ಲಿ ಎಂದರು.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News