ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಆಸ್ಪತ್ರೆಗೆ ದಾಖಲು

3-4 ತಿಂಗಳಿನಿಂದ 86 ವರ್ಷಗಳ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೃತಕ ಉಸಿರಾಟದ ಉಪಕರಣದ ಉಪಯೋಗದಲ್ಲಿದ್ದರು. 

Written by - Bhavishya Shetty | Last Updated : May 8, 2022, 01:03 PM IST
  • ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು
  • ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು
  • ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪದ್ಮಶ್ರೀ ಪುರಸ್ಕೃತೆ ಸುಕ್ರಜ್ಜಿ ಆಸ್ಪತ್ರೆಗೆ ದಾಖಲು  title=
sukri bommagowda

ದಕ್ಷಿಣ ಕನ್ನಡ: ಪದ್ಮಶ್ರೀ ಪುರಸ್ಕೃತೆ, ಸುಪ್ರಸಿದ್ಧ ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ ಉಸಿರಾಟದ ತೊಂದರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ಸುಕ್ರಿ ಬೊಮ್ಮಗೌಡ ಅವರು ಐಸಿಯುನಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಆದರೆ ಇಂದು ಅವರ ದೇಹಸ್ಥಿತಿಯನ್ನು ಗಮನಿಸಿ ಆಂಜಿಯೋಗ್ರಾಫಿ ಮಾಡುವುದೋ, ಇಲ್ಲವೋ ಎಂದು ವೈದ್ಯರು ನಿರ್ಧರಿಸಲಿದ್ದಾರೆ. 

ಇದನ್ನು ಓದಿ: Happy mother's day: ಅಮ್ಮ ಎಂದರೆ ಅಷ್ಟೇ ಸಾಕೇ?

3-4 ತಿಂಗಳಿನಿಂದ 86 ವರ್ಷಗಳ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೃತಕ ಉಸಿರಾಟದ ಉಪಕರಣದ ಉಪಯೋಗದಲ್ಲಿದ್ದರು. ಆದರೆ ಕಳೆದ ನಾಲ್ಕು ದಿನಗಳಿಂದ ಈ ಕೃತಕ ಉಸಿರಾಟ ಉಪಕರಣ ಇದ್ದಾಗ್ಯೂ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನು ಓದಿ: ರಿಲೀಸ್‌ಗೂ ಮುನ್ನ 'ವಿಕ್ರಾಂತ್ ರೋಣ' ರೆಕಾರ್ಡ್‌!

ಸುಕ್ರಿ ಬೊಮ್ಮಗೌಡ ಅವರು ಸುಕ್ರಜ್ಜಿ ಎಂದೇ ಖ್ಯಾತಿ ಗಳಿಸಿದ್ದಾರೆ. ಸುಕ್ರಜ್ಜಿಗೆ ಸುಮಾರು 5000ಕ್ಕಿಂತಲೂ ಹೆಚ್ಚು ಹಾಲಕ್ಕಿ ಹಾಡುಗಳು ಕಂಠಪಾಠವಾಗಿವೆ. ಇವರು ನಾಡೋಜ ಪ್ರಶಸ್ತಿಯನ್ನು ಸಹ ಪಡೆದಿದ್ದಾರೆ. ಕುಡಿತದಿಂದ ಗಂಡ ಸಾವನ್ನಪ್ಪಿದ ಬಳಿಕ  ಎಚ್ಚೆತ್ತುಕೊಂಡ ಸುಕ್ರಜ್ಜಿ, 1990 ದಶಕದಲ್ಲಿ ಮದ್ಯ ವಿರೋಧಿ ಆಂದೋಲನವನ್ನು ಪ್ರಾರಂಭಬಿಸಿದರು. ಇವರಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ, ಸಹ್ಯಾದ್ರಿ ಕನ್ನಡ ಸಂಘದ ಅಡಿಗ ಪ್ರಶಸ್ತಿ, ಮಾಧವ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News