ಚಾಮರಾಜನಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯು ಕುಟುಂಬಕ್ಕೆ ನೆರವಾದ ಘಟನೆ ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ
ಗುಂಡ್ಲುಪೇಟೆ ತಾಲೂಕಿನ ಕಾಳನಹುಂಡಿ ಗ್ರಾಮದ ಮಣಿಕಂಠ(23) ಎಂಬ ಯುವಕ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಬೇಗೂರು ಶಾಖೆಯಲ್ಲಿ 20 ರೂ. ಹಣ ಪಾವತಿಸಿ ಪಿಎಂ ಸುರಕ್ಷಾ ಯೋಜನೆ ವಿಮೆ ಪಡೆದಿದ್ದರು. ಅದಾದ ಎರಡೇ ತಿಂಗಳಲ್ಲಿ ನಂಜನಗೂಡು ತಾಲೂಕಿನ ಎಲಚಗೆರೆ ಗೇಟ್ ನಲ್ಲಿ ಬೈಕ್- ಕಾರು ಅಫಘಾತದಲ್ಲಿ ಮಣಿಕಂಠ ತೀವ್ರವಾಗಿ ಗಾಯಗೊಂಡು ಬಳಿಕ ಅಸುನೀಗಿದ್ದರು.
ಇದನ್ನೂ ಓದಿ: ಲೋಕ ಸಮರ ಫಲಿತಾಂಶ ಎಫೆಕ್ಟ್: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಲಿತ-ಲಿಂಗಾಯತ ನಾಯಕರ ಒತ್ತಡ?!
ಮೃತಪಟ್ಟ ವಿಚಾರ ತಿಳಿದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಎಲ್ಲಾ ದಾಖಲೆ ಪ್ರಕ್ರಿಯೆ ಮುಗಿಸಿ ವಿಮೆಯ ನಾಮಿನಿಯಾಗಿದ್ದ ಮಣಿಕಂಠ ತಾಯಿ ಮಹಾದೇವಮ್ಮ ಅವರಿಗೆ 2 ಲಕ್ಷ ರೂ. ಪರಿಹಾರದ ಮೊತ್ತವನ್ನು ಶುಕ್ರವಾರ ವಿತರಿಸಿದ್ದಾರೆ.ಅಂದಹಾಗೆ, ಕೇವಲ 20 ರೂ. ಪಾವತಿಸಿ ವಿಮೆ ಪಡೆದಿದ್ದು ಈಗ ಕುಟುಂಬಕ್ಕೆ ನೆರವಾದಂತಾಗಿದೆ. ಕುಟುಂಬಕ್ಕೆ ಪಿಎಂ ಸುರಕ್ಷಾ ಭೀಮಾ ಯೋಜನೆ ನೆರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.