Pahalgam Terrrorist Attack: ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ವಿಚಾರವಾಗಿ ಮಾತನಾಡಿರುವ ಅವರು, ʼಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ - ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕುʼ ಎಂದು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ. ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನ ಮಾಧ್ಯಮದಲ್ಲಿ ಸಿಎಂ ಹವಾ..! ಸಿದ್ದರಾಮಯ್ಯ ಪಹಲ್ಗಾಮ್ ಹೇಳಿಕೆಯನ್ನು ಕೊಂಡಾಡಿದ ಸುದ್ದಿ ವಾಹಿನಿ..
ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ - ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.
ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.ಪಹಲ್ಗಾಮ್ ನಲ್ಲಿ ನಡೆದ ಪಾಕ್…
— Siddaramaiah (@siddaramaiah) April 27, 2025
ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು, ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಒಗ್ಗಟ್ಟಿನ ಮಂತ್ರವನ್ನ ಜಪಿಸಿದ್ದಾರೆ.
ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









