ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದ್ದ  ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಕೊನೆಗೂ  ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
 
ಈ ವಿಷಯ ಕುರಿತಾಗಿ ಬುಧವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ  ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಪರೇಶ್ ಮೇಸ್ತಾ ಮರಣೋತ್ತರ ಪರೀಕ್ಷಾ ವರದಿ ಬರಲು ಇನ್ನು 8ರಿಂದ 10 ದಿನ ಬೇಕು. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿಯುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿಯು  ಚುನಾವಣೆಯನ್ನು ಮುಂದಿಟ್ಟುಕೊಂಡು ಈ ರೀತಿಯಾದ ಅನಗತ್ಯ ಆರೋಪಗಳನ್ನು ಸರ್ಕಾರದ ಮೇಲೆ ಮಾಡುತ್ತಿದೆ. 


COMMERCIAL BREAK
SCROLL TO CONTINUE READING

ಈ ಹಿಂದೆ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಇದೆ ರೀತಿ ನಡೆದುಕೊಂಡಿತ್ತು. ಆದರೆ ಕೊನೆಗೆ ಸಿಬಿಐ ಸಹ ಡಿ ಕೆ ರವಿ ಪ್ರಕರಣಕ್ಕೆ  ಕ್ಲೀನ್ ಚಿಟ್ ನೀಡಿತ್ತು  ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಈಗಾಗಲೇ ಪರಮೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣವಾಗಿ   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದೇನೆ ,ಆದ್ದರಿಂದ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸರ್ಕಾರ ತಿರ್ಮಾನಿಸಿದೆ  ಎಂದು  ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.