ಬೆಳಗಾವಿ: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು


COMMERCIAL BREAK
SCROLL TO CONTINUE READING

ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ಕೋರಿದರು.


ಇದನ್ನೂ ಓದಿ: ʻಬ್ಯಾಚುಲರ್ ಪಾರ್ಟಿʼ ಕೊಡಲು ರೆಡಿಯಾದ ರಕ್ಷಿತ್ ಶೆಟ್ಟಿ! 


2023ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿಧೇಯಕವನ್ನು ಪರ್ಯಾಲೋಸಬೇಕೆಂದು ಕೋರಿದರು. 2023ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವನ್ನು ಪರ್ಯಾಯಲೋಚಿಸಲು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕೋರಿದರು. ಅದೇ ರೀತಿ 2023ನೇ ಸಾಲಿನ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023ನ್ನು ಪರ್ಯಾಯಲೋಚಿಸಲು ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ಅವರು ಕೋರಿದರು.


ಇದನ್ನೂ ಓದಿ: ಪೂಜಾ ಗಾಂಧಿ ತಂಗಿ ಯಾರು ಗೊತ್ತೇ, ಇವರು ಕೂಡ ಕನ್ನಡದ ಟಾಪ್‌ ನಟಿ! 


ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ವಿಧೇಯಕಗಳ ಮೇಲೆ ಚರ್ಚೆಗೆ ಅವಕಾಶ ಕಲ್ಪಿಸಿದರು. ಚರ್ಚೆಯ ಬಳಿಕ ಸಭಾಪತಿಗಳು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಸದನ ಸದಸ್ಯರು ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದರು. ಸಚಿವರು, ವಿಧೇಯಕಗಳನ್ನು ಅಂಗೀಕರಿಸಲು ಕೋರಿದ ಬಳಿಕ ಸಭಾಪತಿಯವರು ಈ ವಿಧೇಯಕಗಳ ಅಂಗೀಕಾರಕ್ಕೆ ವಿಧಾನ ಪರಿಷತ್‌ನಿಂದ ಅನುಮೋದನೆ ದೊರೆತಿದೆ ಎಂದು ಘೋಷಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.